ಬ್ರೇಕಿಂಗ್ ನ್ಯೂಸ್
07-09-22 07:22 am HK News Desk ಕರ್ನಾಟಕ
ಬೆಂಗಳೂರು, ಸೆ 7: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
ಮಂಗಳವಾರ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರ ಬುಧವಾರದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಗುರುವಾರ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
9 ಬಾರಿ ಸ್ಪರ್ಧಿಸಿ 8 ಬಾರಿ ಗೆದ್ದಿದ್ದ ಕತ್ತಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿದ್ದರು. 9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ. ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಅವರು ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು. ಮೊದಲ ಪ್ರಯತ್ನದಲ್ಲೇ ಗೆಲುವು ಕಂಡಿದ್ದರು. 1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದಿದ್ದರು. 2004ರಲ್ಲಿ ಕಾಂಗ್ರೆಸ್‌ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲು ಕಂಡರು.
2008ರಲ್ಲಿ ಜೆಡಿಎಸ್ ಸೇರಿದರು, ಗೆಲುವು ಕಂಡರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.
ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು. ಬಳಿಕ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಇಲಾಖೆ ಖಾತೆ ಸಚಿವರಾಗಿದ್ದಾರೆ.
ಸದ್ಯ ಕತ್ತಿ ಅವರ ಪಾರ್ಥೀವ ಶರೀರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿದ್ದು, ಅಲ್ಲಿಂದ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಏರ್‌ಲಿಫ್ಟ್ ಮೂಲಕ ಕರೆದೊಯ್ಯಲಾಗುತ್ತಿದೆ. ಉಮೇಶ್ ಕತ್ತಿಯ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
ಉಮೇಶ್ ಕತ್ತಿ ಅವರ ನಿಧನಕ್ಕೆ ಕಣ್ಣೀರಿನ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಸಂಜೆ ಐದು ಗಂಟೆಗೆ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದಲ್ಲಿ ಉಮೇಶ್ ಕತ್ತಿಯವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಸಾರ್ವಜನಿಕರ ದರ್ಶನಕ್ಕಾಗಿ ಮಧ್ಯಾಹ್ನ ಎರಡು ಗಂಟೆವರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದರು.
Forest, Food & Civil Supplies Minister Umesh Katti, the swaggering BJP leader who dreamt of statehood for north Karnataka, died following a cardiac arrest on Tuesday night. Katti, 61, was rushed to a private hospital from his Dollar’s Colony.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm