ಬ್ರೇಕಿಂಗ್ ನ್ಯೂಸ್
10-09-22 02:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಸಿದ್ದರಾಮಯ್ಯ ಕಾಲದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೊನೆಗೂ ಎಳ್ಳುನೀರು ಬಿಡಲಾಗಿದೆ. ಇತ್ತೀಚೆಗೆ ಎಸಿಬಿ ರದ್ದುಪಡಿಸಿ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರಕಾರ ಅನುಷ್ಠಾನಕ್ಕೆ ತಂದಿದ್ದು, ಎಸಿಬಿ ರದ್ದುಪಡಿಸಿ ಪೂರ್ಣ ಅಧಿಕಾರವನ್ನು ಲೋಕಾಯುಕ್ತಕ್ಕೆ ವಹಿಸಿ ಆದೇಶ ಮಾಡಿದೆ.
ಕಳೆದ ಆರು ವರ್ಷಗಳಲ್ಲಿ ಎಸಿಬಿ ಅಡಿ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಅಲ್ಲದೆ, ಎಸಿಬಿಗೆ ನೀಡಿದ್ದ ತನಿಖೆ ನಡೆಸುವ ಅಧಿಕಾರವನ್ನೂ ವಾಪಸ್ ಪಡೆದಿದೆ. ಆಮೂಲಕ ಎಸಿಬಿ ಇತಿಹಾಸದ ಪುಟ ಸೇರಿದರೆ, ಹೈಕೋರ್ಟ್ ಆದೇಶ ಯಥಾವತ್ ಅಸ್ತಿತ್ವಕ್ಕೆ ಬಂದಂತಾಗಿದೆ. 2016ರ ಮಾರ್ಚ್ 19ರಂದು ಲೋಕಾಯುಕ್ತದ ತನಿಖಾಧಿಕಾರ ಕಡಿತಗೊಳಿಸಿ, ಹೊಸತಾಗಿ ಎಸಿಬಿ ರಚಿಸಲಾಗಿತ್ತು.
ರಾಜ್ಯ ಸರಕಾರ ನೀಡಿರುವ ಆದೇಶದಲ್ಲಿ, ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪ ನಿಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪ ನಿಬಂಧ 2(ಎಸ್) ರನ್ವಯ ಲೋಕಾಯುಕ್ತಕ್ಕೆ ಮರಳಿ ನೀಡಲಾಗಿದೆ. ಅಲ್ಲದೆ, ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವುದರಿಂದ ಅದಕ್ಕೆ ನೀಡಲಾಗಿದ್ದ ತನಿಖಾಧಿಕಾರ ಮತ್ತು ಪೊಲೀಸ್ ಠಾಣೆಗಳ ಅಧಿಕಾರವನ್ನು ಹಿಂಪಡೆಯಲಾಗಿದ್ದು ಬಾಕಿಯಿರುವ ಪ್ರಕರಣಗಳು, ತನಿಖೆಗಳು, ವಿಚಾರಣೆಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಕ್ಕೆ ವಹಿಸುವುದು ಎಂದು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.
ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತಕ್ಕೆ ಇದ್ದ ಸ್ವತಂತ್ರ ತನಿಖೆ ನಡೆಸುವ ಅಧಿಕಾರವನ್ನು ಮೊಟಕುಗೊಳಿಸಿ, ಎಸಿಬಿ ರಚಿಸಲಾಗಿತ್ತು. ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದರೂ, ಐಪಿಎಸ್, ಐಎಎಸ್ ದರ್ಜೆಯ ಅಧಿಕಾರಿಗಳನ್ನು ತನಿಖೆ ನಡೆಸಲು ಮುಖ್ಯಮಂತ್ರಿ ಅನುಮತಿ ಅಗತ್ಯವಿತ್ತು. ಅಲ್ಲದೆ, ಎಸಿಬಿಗೆ ಮುಖ್ಯಮಂತ್ರಿಯೇ ಮುಖ್ಯಸ್ಥನಂತೆ ತೋರಿಸಲಾಗಿತ್ತು. ಆಮೂಲಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಎಸಿಬಿ ತನಿಖಾ ತಂಡಕ್ಕೆ ರಾಜ್ಯಾಡಳಿತದ ಮೂಲಕ ಮೂಗುದಾರ ತೊಡಿಸಲಾಗಿತ್ತು. ಇದರಿಂದ ಶಾಸಕರು, ದೊಡ್ಡ ಮಟ್ಟದ ಅಧಿಕಾರಿಗಳು ಪ್ರಕರಣದಲ್ಲಿ ಸಿಕ್ಕಿಬಿದ್ದರೂ, ಆಡಳಿತಾಂಗದ ಮೇಲೆ ಪ್ರಭಾವ ಬೀರಿ ತನಿಖೆಯಾಗದಂತೆ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಎಸಿಬಿ ರಚನೆಯ ಬಗ್ಗೆ ಸಿದ್ದರಾಮಯ್ಯ ಸರಕಾರದ ಬಗ್ಗೆ ತೀವ್ರ ವಿರೋಧವೂ ಸಾರ್ವಜನಿಕರಿಂದ ಕೇಳಿಬಂದಿತ್ತು.
The Karnataka government on Friday issued an order abolishing the state Anti-Corruption Bureau (ACB), saying all its cases will be transferred to the Lokayukta. The government order said that as per the orders of the Karnataka High Court, the ACB will be abolished and police station powers reordered to Lokayukta police. All the cases which are pending/under inquiry/other disciplinary actions will be transferred to Lokayukta, it added.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm