ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm