ಬ್ರೇಕಿಂಗ್ ನ್ಯೂಸ್
12-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಬೆಂಗಳೂರಿನಲ್ಲಿ ಮಳೆಯಿಂದಾಗಿ ರಾಡಿ ಎದ್ದ ಬೆನ್ನಲ್ಲೇ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯೊಬ್ಬಳು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬಾಣಸವಾಡಿ ಬಳಿ ನಡೆದಿದೆ. ಎಚ್‌ಬಿಆರ್ ಲೇಔಟ್ ನಿವಾಸಿಯಾಗಿದ್ದ ನೇಪಾಳ ಮೂಲದ ತಾರಾ ಬಡಾಯಿಕ್(23) ಮೃತ ಯುವತಿ.
ಘಟನೆ ಸಂದರ್ಭದಲ್ಲಿ ಹಿಂಬದಿ ಸವಾರನಾಗಿದ್ದ ದಿಲೀಪ್(38) ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶನಿವಾರ ತಡರಾತ್ರಿ 12.30ರ ಸುಮಾರಿಗೆ ಸಾರಾಯಿಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿ ಇದ್ದ ಚರಂಡಿಗೆ ಬಿದ್ದಿದ್ದಾಳೆ. ಈ ವೇಳೆ, ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆ ಸೇರಿಸಲಾಗಿತ್ತು.
ನೇಪಾಳ ಮೂಲದ ತಾರಾ ಬಡಾಯಿಕ್ ಕೆಲವು ವರ್ಷಗಳಿಂದ ಬೆಂಗಳೂರಿನ ಎಚ್‌ಬಿಆರ್ ಲೇಔಟ್ ನಲ್ಲಿ ನೆಲೆಸಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದಳು. ಶನಿವಾರ ರಾತ್ರಿ ತನ್ನ ಡಿಯೋ ಸ್ಕೂಟರಿನಲ್ಲಿ ಸ್ನೇಹಿತ ದಿಲೀಪ್ ನನ್ನು ಹಿಂಬದಿ ಕೂರಿಸಿಕೊಂಡು ಎಚ್‌ಬಿಆರ್ ಲೇಔಟ್ ಮುಖ್ಯರಸ್ತೆಯಲ್ಲಿ ಸಾರಾಯಿ ಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ಹೊರಟ್ಟಿದ್ದಳು. ಮಾರ್ಗ ಮಧ್ಯೆ ಖಾಸಾ ಗ್ರ್ಯಾಂಡ್ ಬರಾಲಾ ಆಪಾರ್ಚ್‌ಮೆಂಟ್ ಬಳಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ತಾರಾ ಬಡಾಯಿಕ್ ತಲೆ ಹಾಗೂ ತೊಡೆಗೆ ಗಂಭೀರ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ತಾರಾ ಬಡಾಯಿಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ತನಿಖೆ ನಂತರ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The incident occurred around 12:30 am when the victim and her friend were on the way to HBR Layout.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm