ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm