ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
![]()
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.


ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm