ಬ್ರೇಕಿಂಗ್ ನ್ಯೂಸ್
28-09-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಕಡೆಗಳಲ್ಲಿರುವ ಆಸ್ತಿಗಳಿಗೆ ಬುಧವಾರ ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೋಲೀಸರ ಜತೆಗೆ ತೆರಳಿದ್ದ ಕೇಂದ್ರ ತನಿಖಾ ದಳದ ಅಧಿಕಾರಿಗಳು, ಪರಿಶೀಲನೆ ವೇಳೆ ಕೆಲವು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.
ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರ ಸಂಬಂಧಿಕರ ಆಸ್ತಿ ವಿವರಗಳ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ. ತನಿಖಾ ತಂಡದ ಅಧಿಕಾರಿಗಳು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಬಿಐ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ಜೊತೆಗೆ ಕರೆದುಕೊಂಡು ಬಂದು, ನಮ್ಮ ಊರಿನ ಆಸ್ತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ನಮ್ಮ ತೋಟದ ಮನೆ, ಊರಿನ ಮನೆಗೆ ಬಂದು ಎಲ್ಲಾ ಆಸ್ತಿಗಳನ್ನು ನೋಡಿದ್ದಾರೆ ಅಂತ ಸಿಬ್ಬಂದಿ ತಿಳಿಸಿದ್ದಾರೆ. ಇಷ್ಟು ಮಾತ್ರ ನಂಗೆ ಗೊತ್ತು ಎಂದರು.
ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, "ಏನು ಮಾಡೋಕೆ ಆಗುತ್ತೆ.. ಇದು ಹಣೆಬರಹ. ಇದು ಟಾರ್ಗೆಟ್ ಅಂತ ನಾನು ಹೇಳುವುದಿಲ್ಲ. ಅವರು ನನ್ನ ಪ್ರೀತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
The CBI sleuths on Wednesday visited Karnataka Congress president D K Shivakumar's properties at his hometown in Ramanagara district and verified the documents related to them, his office said.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm