ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm