ಬ್ರೇಕಿಂಗ್ ನ್ಯೂಸ್
21-10-22 05:37 pm HK News Desk ಕರ್ನಾಟಕ
ಮೈಸೂರು, ಅ.21 : ವಿಧಾನಸಭೆ ಚುನಾವಣೆಗೆ ಆರು ತಿಂಗಳು ಇರುವಾಗಲೇ ದೇವೇಗೌಡರು ತೊಡೆ ತಟ್ಟಿದ್ದಾರೆ. ಪಕ್ಷದ ಪಾಲಿಗೆ ಪ್ರಬಲ ಕೋಟೆ ಎಂದೇ ಪರಿಗಣಿಸಲ್ಪಟ್ಟ ಮೈಸೂರಿನಲ್ಲಿ ಚುನಾವಣೆಗೆ ತಯಾರಿ ನಡೆಸಿದ್ದು ಅಭ್ಯರ್ಥಿಗಳ ಪಟ್ಟಿಯನ್ನೂ ಘೋಷಣೆ ಮಾಡಲಾಗಿದೆ.
ಮೈಸೂರು ಭಾಗದ ಹಿರಿಯ ನಾಯಕ ಜಿಟಿ ದೇವೇಗೌಡರ ಜೊತೆ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ ಗೌಡರು, ಅಲ್ಲಿಂದಲೇ ಮೈಸೂರು ಜಿಲ್ಲೆಯ ಎಲ್ಲ ಹೊಣೆಯನ್ನೂ ಜಿಟಿಡಿಗೆ ಎಂದು ಘೋಷಿಸಿದ್ದಾರೆ. ಅಲ್ಲದೆ, ಜಿಟಿಡಿ ಅವರ ನಾಯಕತ್ವದ ಬಗ್ಗೆ ಏನೇ ಅಪಸ್ವರ ಕೇಳಿದರೂ ನಾನು ಸಹಿಸುವುದಿಲ್ಲ. ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಮೈಸೂರು ಭಾಗದಲ್ಲಿ ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ, ಅವರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಇದೇ ವೇಳೆ, ಚಾಮುಂಡಿ ಸನ್ನಿಧಿಯಲ್ಲಿಯೇ ಮೈಸೂರು ಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜಿ.ಟಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ. ದೇವೇಗೌಡ, ಹುಣಸೂರಿಗೆ ಜಿ.ಟಿ.ಡಿ ಮಗ ಹರೀಶ್ ಗೌಡ, ಕೆ.ಆರ್. ನಗರಕ್ಕೆ ಸಾ.ರಾ. ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಅಶ್ವಿನ್ ಕುಮಾರ್, ಎಚ್.ಡಿ. ಕೋಟೆಗೆ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್‌ಗೆ ಟಿಕೆಟ್ ಬಹುತೇಕ ಅಂತಿಮ ಎಂದು ಪ್ರಕಟಿಸಿದ್ದಾರೆ.
ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ನನ್ನ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನು ಯಾವ ಗೊಂದಲಗಳು ಉಳಿದಿಲ್ಲ. ಚಾಮುಂಡಿ ತಾಯಿಗೆ ಎಚ್.ಡಿ. ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿದ್ದಾರೆ. ಜನವರಿ ತಿಂಗಳಲ್ಲಿ ಎಚ್.ಡಿ. ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಎಚ್.ಡಿ. ದೇವೇಗೌಡರ ಉತ್ಸಾಹ ನೋಡಿ ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ.ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ಹೇಳಿದ್ದಾರೆ.
Chamundeshwari MLA G.T. Deve Gowda, who was estranged from the Janata Dal (Secular) and flip-flopped between the BJP and the Congress, announced here on Thursday that he would work ‘’to bring the JD(.S) to power’’.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm