ಬ್ರೇಕಿಂಗ್ ನ್ಯೂಸ್
29-10-22 04:18 pm Bangalore Correspondent ಕರ್ನಾಟಕ
ಬೆಂಗಳೂರು, ಅ.29: ದೀಪಾವಳಿ ಹಬ್ಬದ ನೆಪದಲ್ಲಿ ಪ್ರಮುಖ ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳ ಕೆಲವು ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ವೀಟ್ ಬಾಕ್ಸ್ ಜೊತೆಗೆ ಲಕ್ಷ ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿರುವ ನಡುವೆಯೇ ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸಬೇಕೆಂದು ಲೋಕಾಯುಕ್ತಕ್ಕೆ ಇಮೇಲ್ ಮೂಲಕ ದೂರು ಸಲ್ಲಿಸಿದೆ. ಬೆಂಗಳೂರಿನ ಪ್ರಮುಖ ಪತ್ರಿಕೆಗಳು ಮತ್ತು ಪ್ರಮುಖ ಸುದ್ದಿ ವಾಹಿನಿಗಳ ರಾಜಕೀಯ ವಿಭಾಗದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ನೀಡಲಾಗಿತ್ತು. ಒಂದು ಲಕ್ಷದಿಂದ 5 ಲಕ್ಷದ ವರೆಗೆ ಪತ್ರಕರ್ತರ ಗ್ರೇಡ್ ಆಧರಿಸಿ ಗಿಫ್ಟ್ ನೀಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು, ಪತ್ರಕರ್ತರ ಒಳಗೆ ಭಾರೀ ಚರ್ಚೆಗೂ ಕಾರಣವಾಗಿದೆ.

ಈ ಪೈಕಿ ಹಣದ ಕಂತೆಯುಳ್ಳ ಗಿಫ್ಟ್ ಪಡೆದ ಪ್ರಜಾವಾಣಿ ವಿಭಾಗದ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಇಬ್ಬರು ಪತ್ರಕರ್ತರು, ತಮ್ಮ ಪತ್ರಿಕಾ ಸಂಸ್ಥೆಯ ಮುಖ್ಯಸ್ಥರಿಗೆ ವಿಷಯ ತಿಳಿಸಿ ಹಣದ ಕಂತೆಯನ್ನು ನೇರವಾಗಿ ಮುಖ್ಯಮಂತ್ರಿ ಕಚೇರಿಗೆ ಹಿಂತಿರುಗಿಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಪತ್ರಿಕಾ ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ಮುಖ್ಯಮಂತ್ರಿಗೆ ಖಂಡನಾ ಪತ್ರವನ್ನು ಬರೆದಿದ್ದಾರೆ ಎನ್ನುವ ಮಾಹಿತಿಗಳಿವೆ.
ಪತ್ರಕರ್ತರಿಗೆ ಲಂಚ ನೀಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ನಲ್ವತ್ತು ಪರ್ಸೆಂಟ್ ಕಮಿಷನ್ ಪಡೆದಿರುವ ಹಣವೇ..? ಅಥವಾ ನಲ್ವತ್ತು ಪರ್ಸೆಂಟ್ ಕಮಿಷನ್ ಹಗರಣವನ್ನು ಮುಚ್ಚಿಡಲು ನೀಡಿದ ಲಂಚವೇ..? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ ಎಂದು ಪ್ರಶ್ನೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಈ ಬಗ್ಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ.
Allegations of Chief Minister’s Office (CMO) ‘gifting’ Rs 1 lakh in cash in Deepavali gift boxes to some journalists has left the state government embarrassed and red-faced. Sources in the CMO have said Chief Minister Basavaraj Bommai has apologised and said he was ignorant about the cash ‘gifted’ to journalists. He is likely to order a probe, the sources said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm