ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.

2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.

ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm