ಬ್ರೇಕಿಂಗ್ ನ್ಯೂಸ್
30-10-22 05:37 pm HK News Desk ಕರ್ನಾಟಕ
ಬೆಂಗಳೂರು, ಅ.30:ಕೆಆರ್ ಪುರಂ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಂದೀಶ್ ಸಾವಿನ ಬಗ್ಗೆ ಆರೋಪಗಳು ಬಂದಿವೆ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ. ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುತ್ತೇನೆ ಎಂದರು. ಇನ್ಸ್ ಪೆಕ್ಟರ್ ನಂದೀಶ್ ಬಿಜೆಪಿ ಭ್ರಷ್ಟಾಚಾರಕ್ಕೆ ಬಲಿಯಾಗಿದ್ದಾರೆಂದು ವಿಪಕ್ಷ ನಾಯಕರು ಆರೋಪಿಸಿದ್ದರು.
ಪತ್ರಕರ್ತರಿಗೆ ಉಡುಗೊರೆ ; ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ

ಪತ್ರಕರ್ತರಿಗೆ ಗಿಫ್ಟ್ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ಸಿನ ಟೂಲ್ ಕಿಟ್ ನಡೆಸುತ್ತಿರುವ ಭಾಗ ಇದು. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಯಾರಿಗೂ ಸೂಚನೆಯನ್ನು ನೀಡಿಲ್ಲ. ಕಾಂಗ್ರೆಸ್ ಇದ್ದಾಗ ಹಲವಾರು ಜನರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲಾ ಪತ್ರಕರ್ತರು ಉಡುಗೊರೆಯನ್ನು ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಿನ್ನೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ವ್ಯಾಖ್ಯಾನ ಮಾಡಿದ್ದು ಅದನ್ನು ನಾನು ಖಂಡಿಸುತ್ತೇನೆ ಎಂದರು.
ಬಿಜೆಪಿಗೆ ಒಬಿಸಿ ಜನರ ಬೆಂಬಲ
ಓಬಿಸಿ ಸಮುದಾಯಗಳ ಜನರ ದೊಡ್ಡ ಪ್ರಮಾಣದ ಬೆಂಬಲ ಬಿಜೆಪಿಗೆ ಇದೆ. ಅದರ ಸಂಕೇತವಾಗಿ ಕಲಬುರಗಿಯಲ್ಲಿ ಬಿಜೆಪಿಯಿಂದ ಓಬಿಸಿ ಸಮಾವೇಶ ಆಯೋಜನೆಗೊಂಡಿದೆ. ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶವಿದೆ. ನಂತರ ಪರಿಶಿಷ್ಟ ಜಾತಿಗಳ ಸಮಾವೇಶ ನಡೆಯಲಿದೆ. ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದ್ದು, ಡಿಸೆಂಬರ್ ತಿಂಗಳಲ್ಲಿ ಮಹಿಳೆಯರ ಸಮಾವೇಶ ಆಯೋಜನೆ ಮಾಡಲು ಪಕ್ಷದ ಅಧ್ಯಕ್ಷರು, ಕೋರ್ ಸಮಿತಿ ತೀರ್ಮಾನ ಮಾಡಿದೆ.
ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಸುಮಾರು 2 ಲಕ್ಷ ಜನ ಸೇರಲಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಸೇರುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
Bangalore police Inspector Sandesh death cm Bommai orders for probe
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm