ಬ್ರೇಕಿಂಗ್ ನ್ಯೂಸ್
31-10-22 10:49 pm HK News Desk ಕರ್ನಾಟಕ
ಹುಬ್ಬಳ್ಳಿ, ಅ 31 : ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಎಲ್ಲಾ-ಗುತ್ತಿಗೆದಾರರು ಕಾಂಗ್ರೆಸ್ ಏಜೆಂಟರು. ಇದೆಲ್ಲಾ ಸಿದ್ದರಾಮಣ್ಣನ ಒಳ ತಂತ್ರಗಾರಿಕೆ. ಸಾಕ್ಷಿ ಪುರಾವೆ ಕೊಡಿ, ಇಲ್ಲವೇ ಲೋಕಾಯುಕ್ತಕ್ಕೆ ದೂರು ಕೊಡಿ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, "ಕೇವಲ ಮಾಧ್ಯಮದವರ ಮುಂದೆ ಮಾತಾಡೋದಲ್ಲ ಕಾಂಗ್ರೆಸ್ ಲೋಕಾಯುಕ್ತದ ಜೀವ ತೆಗೆದಿತ್ತು, ನಾವು ಓಪನ್ ಮಾಡಿದೀವಿ, ನೀವು ಬೇಕಾದರೆ ಕೇಸ್ ಕೊಡಿ. ನಂತರ ತನಿಖೆಯಾಗುತ್ತದೆ. ನಮ್ಮ ಸರಕಾರದ ಮೇಲೆ ಆರೋಪ ಮಾಡುತ್ತಿರುವ ಗುತ್ತಿಗೆದಾರರು ಕಾಂಗ್ರೆಸ್ ಏಜೆಂಟರು ಮಾಡುತ್ತಿರುವ ಕೆಲಸ. ಕಾಂಗ್ರೆಸ್‌ನಲ್ಲಿ ಅತೀ ಹೆಚ್ಚು ಗುತ್ತಿಗೆದಾರರು ಇದ್ದಾರೆ, ಅವರೆಲ್ಲರೂ ಕಾಂಗ್ರೆಸ್‌ನಿಂದ ಟಿಕೆಟ್ ಕೇಳಲು ತಯಾರಾಗಿದ್ದಾರೆ. ಡಿಕೆಶಿ-ಸಿದ್ದರಾಮಯ್ಯ ಗುತ್ತಿಗೆದಾರರಿಗೆ ನಿಮಗೆ ಟಿಕೆಟ್ ಬೇಕೆಂದರೆ ಇಂತ ಕೆಲಸ ಮಾಡಿ ಎಂದು ಹೇಳಿರಬಹುದು" ಎಂದು ತಿಳಿಸಿದರು.
"ಸಿದ್ದರಾಮಯ್ಯ ಭ್ರಷ್ಟಾಚಾರದ ಕುರಿತು ನಮ್ಮ ಬಳಿ ಫೈಲ್ ಹಲವು ಫೈಲ್‌ಗಳಿವೆ. ಸಮಯ ಬರಲಿ ನಾವೆಲ್ಲ ದಾಖಲೆ ಸಂಗ್ರಹ ಮಾಡುತ್ತಿದ್ದೀವಿ. ಈಗಾಗಲೇ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ. 2ನೇ ದೂರಿನಲ್ಲಿ 1.3 ಕೋಟಿ ರೂ. ಚೆಕ್ ಬಹಿರಂಗವಾಗಿದೆ, ಇನ್ನು ಹತ್ತಾರು ದಾಖಲೆಗಳಿವೆ, ಸಮಯ ಬರಲಿ ನಾವು ತೋರುಸುತ್ತೇವೆ. ದಾಖಲೆ ಇಟ್ಕೊಂಡು ನಾವು ಹೋಗುತ್ತೇವೆ" ಎಂದು ಕಟೀಲು ಎಚ್ಚರಿಕೆ ನೀಡಿದರು.
ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ
ವಿಜಯಪುರ ಹಾಗೂ ಕೊಳ್ಳೆಗಾಲದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ. ಇಡೀ ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆದ್ದಿದೆ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆ ತಿಳಿಸುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಜನ ಮೆಚ್ಚಿದಾರೆ ಅನ್ನೋದಕ್ಕೆ ಇದು ಉದಾಹರಣೆ. ಅಲ್ಲದೆ ಕಾಂಗ್ರೆಸ್‌ನವರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು, ಆದರೆ ಜನತೆ ಅದನ್ನು ಸುಳ್ಳು ಎಂದು ಜನರು ಮತ ನೀಡುವ ಮೂಲಕ ಅದನ್ನು ಸುಳ್ಳು ಮಾಡಿದ್ದಾರೆ. ಮುಂದಿನ ಚುನಾಚಣೆಗೆ ಇದು ದಿಕ್ಸೂಚಿ ಎಂದು ಕಟೀಲು ವಿಶ್ವಾಸ ವ್ಯಕ್ತಪಡಿಸಿದರು.
We have many files of Siddaramaiah over Corruption slams Nalin Kumar in Hubbali.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm