ಬ್ರೇಕಿಂಗ್ ನ್ಯೂಸ್
14-11-22 01:24 pm HK News Desk ಕರ್ನಾಟಕ
ಮೈಸೂರು, ನ.14 : ಮಸೀದಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೆ ಅಂತಹ ನಿಲ್ದಾಣಗಳನ್ನು ನಾವೇ ಒಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ 'ಟಿಪ್ಪು ನಿಜ ಕನಸುಗಳು' ನಾಟಕ ಕೃತಿ ಬಿಡುಗಡೆ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಕೆಲವು ಕಡೆ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರು
ಇದೇ ವೇಳೆ ಈಗಾಗಲೇ ಮೈಸೂರು ರೈಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರದೇ ಹೆಸರಿಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು.
Mp Pratap Simha warns of demolishing bus stands with the model of Gumbaz in Mysuru
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm