ಬ್ರೇಕಿಂಗ್ ನ್ಯೂಸ್
18-11-22 04:44 pm HK News Desk ಕರ್ನಾಟಕ
ಮೈಸೂರು, ನ.18 : ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ಈ ಬಗ್ಗೆ ಪೊಲೀಸ್ ದೂರು ನೀಡಿದ್ದು ತನಿಖೆ ನಡೆಸಲು ಒತ್ತಾಯಿಸಿದ್ದೇವೆ. ಈ ಬಗ್ಗೆ ನಾಳೆ(ನ.19) ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮತದಾರ ಪಟ್ಟಿ ಪರಿಷ್ಕರಣೆ ಕೆಲಸವನ್ನು ಬಿಬಿಎಂಪಿ ಆಯುಕ್ತರು ಖಾಸಗಿ ಕಂಪೆನಿಗೆ ವಹಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿಗೆ ಗೊತ್ತಿದ್ದೇ ಈ ಕೆಲಸ ಆಗಿದೆ. ಚುನಾವಣಾ ಆಯೋಗ ಸ್ವೀಪ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಇವರು ಕಾಂಪಿಟೇಟಿವ್ ಬಿಡ್ ಕರೆಯಬೇಕಿತ್ತು. ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಕ್ಕೆ ಚಿಲುಮೆ ಮತ್ತು ಹೊಂಬಾಳೆ ಕಂಪನಿಗೆ ಕೊಟ್ಟಿದ್ದಾರೆ. ಇದಕ್ಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ. ಆ ಕಂಪನಿ ಲಾಭ ಇಲ್ಲದೆ ಇದನ್ನು ಮಾಡುತ್ತದೆಯೇ ? ಅಲ್ಪಸಂಖ್ಯಾತ, ದಲಿತರು, ಹಿಂದುಳಿದವರು ಕಾಂಗ್ರೆಸ್ ಪರ ಇರುತ್ತಾರೆ. ಮತಪಟ್ಟಿಯಿಂದ ಅಂತಹ ಮತದಾರರ ಮಾಹಿತಿಯನ್ನು ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ಆರೋಪ ಮಾಡಿದ ಮೇಲೆ ಬಿಬಿಎಂಪಿ ಆಯುಕ್ತರು ರಕ್ಷಣಾತ್ಮಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಇಲ್ಲಿ ಮಾಹಿತಿ ಕಳ್ಳತನ ಆಗಿರುವುದು ನಿಜ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಎಲ್‌ಓಗಳು ಯಾವಾಗಲೂ ಸರ್ಕಾರಿ ಅರೆ, ಸರ್ಕಾರಿ ನೌಕರರಾಗಬೇಕು. ಇವರು ತಮಗೆ ಬೇಕಾದವರನ್ನು ಬಿಎಲ‌್‌ಒ ಮಾಡಿಕೊಂಡಿದ್ದಾರೆ. ಇದು ಕಾನೂನು ಬಾಹಿರ ಕೆಲಸ. ಖಾಸಗಿಯವರನ್ನ ಬಿಎಲ್‌ಒಗಳಾಗಿ ನೇಮಕ ಮಾಡುತ್ತಿರುವುದಕ್ಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.
ಮತದಾರ ಪಟ್ಟಿ ಪರಿಷ್ಕರಣೆ ಅಕ್ರಮವೂ ಆಪರೇಷನ್ ಕಮಲ ಮತ್ತು ಭ್ರಷ್ಟಾಚಾರದ ಭಾಗ. ಚುನಾವಣೆಯಲ್ಲಿ ಗೆಲ್ಲೋಕೆ ಏನೆಲ್ಲ ಆಟ ಆಡ್ತಾರೆ ಅನ್ನೋದಕ್ಕೆ ಇದೂ ಒಂದು ಉದಾಹರಣೆ. ಬಿಜೆಪಿಯವರೂ ಏನೂ ಬೇಕಾದ್ರೂ ಮಾಡುತ್ತಾರೆ ಎಂಬುದಕ್ಕೆ ಇದು ಸಾಕ್ಷಿ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದು ಬೇಡ, ಇಡೀ ರಾಜ್ಯದಲ್ಲಿ ಪ್ರಚಾರ ನಡೆಸಲಿ ಎಂಬ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನೂ ಪರಿಗಣನೆಗೆ ತೆಗೆದುಕೊಳ್ಳೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Election process corrupted by ruling govt Karnataka Congress Siddaramaiah attacks BJP, CM Bommai
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm