ಬ್ರೇಕಿಂಗ್ ನ್ಯೂಸ್
19-11-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಮತದಾರರ ಮಾಹಿತಿ ಸಂಗ್ರಹ ಹಗರಣ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ನಡುವಿನ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. ಕಾಂಗ್ರೆಸ್ ನ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡುತ್ತಲ್ಲೇ ಇದೆ.
ಕಾಂಗ್ರೆಸ್ ಪಕ್ಷಕ್ಕೆ ಇದು ತಿರುಗುಬಾಣವಾಗಲಿದೆ ಎಂಬ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ತಿರುಗುಬಾಣವಲ್ಲ, ಈ ವಿಚಾರದಲ್ಲಿ ನಾವು ತಪ್ಪು ಮಾಡಿದ್ದರೆ ನೇಣು ಹಾಕಲಿ’ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಸಲ್ಲಿಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಈ ಮೊಕದ್ದಮೆ ಸಲ್ಲಿಸಲು ತಡ ಯಾಕೆ? ಕೂಡಲೇ ಸಲ್ಲಿಸಲಿ. ಈ ಕೇಸ್ ಎದುರಿಸುವುದು ಹೇಗೆ ಎಂದು ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಬಮ್ಮಾಯಿ ಅವರು ಹಾಗೂ ಅವರ ಹಿಂಬಾಲಕರಿಂದ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ. ಚಿಲುಮೆ ಈ ಅಕ್ರಮದ ಸಾಧನವಾಗಿದೆ. ಈ ವಿಚಾರವನ್ನು ನಾವು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಶ್ನಿಸುತ್ತೇವೆ. ಜನತಾ ನ್ಯಾಯಾಲಯದ ಮುಂದೆ ಇಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಕರಾಗಿ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಸುರ್ಜೇವಾಲ ಅವರು ತಿಳಿಸಿದ್ದಾರೆ.
ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ‘ಈ ಸಮರದಲ್ಲಿ ಬೊಮ್ಮಾಯಿ ಅವರು ಸೋಲಲಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಮಾತ್ರವಲ್ಲ. ಅವರು ಜೈಲಿಗೂ ಹೋಗುತ್ತಾರೆ. ಹೀಗಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಬೇಕು. ಭಾಗಿಯಾಗಿರುವ ಇತರ ಎಲ್ಲ ಅಧಿಕಾರಿಗಳು ಬಂಧನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಕರ್ನಾಟಕ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ಬೊಮ್ಮಾಯಿ ಅವರ ಪ್ರಕಾರ ಈ ಆರೋಪ ನಿರಾಧಾರವಾಗಿದ್ದರೆ ತನಿಖೆಗೆ ಆದೇಶ ನೀಡಿದ್ದು ಯಾಕೆ?’ ಎಂದರು ಎಂದು ಪ್ರಶ್ನಿಸಿದ್ದಾರೆ.
Karnataka Pradesh Congress Committee president DK Shivakumar alleged that minister Ashwath Narayan and his team are behind the voter data theft case in Bengaluru, news agency ANI reported. DK Shivakumar alleged the minister's team even deleted lakhs of votes using illegally collected data.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm