ಬ್ರೇಕಿಂಗ್ ನ್ಯೂಸ್
25-11-22 10:36 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಬೆಂಗಳೂರಿನಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶ ಮಾಡಿದೆ. ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಲ್ಲದೆ, ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶ ಮಾಡಿದೆ.
ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಅಮಾನತಾದವರು. ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಅವರು ಶಿವಾಜಿನಗರ, ಚಿಕ್ಕಪೇಟೆ ಕ್ಷೇತ್ರದ ಉಸ್ತುವಾರಿ ಸಹ ಆಗಿದ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಕೆ.ಶ್ರೀನಿವಾಸ್ ಅವರು ಮಹದೇವಪುರ ಕ್ಷೇತ್ರದ ಉಸ್ತುವಾರಿ ಅಧಿಕಾರಿ ಆಗಿದ್ದರು. ಇದೀಗ ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಕೇಂದ್ರ ಚುನಾವಣಾ ಆಯೋಗ, ರಂಗಪ್ಪ ಹಾಗೂ ಕೆ.ಶ್ರೀನಿವಾಸ್ ವಿರುದ್ಧ ಇಲಾಖಾ ವಿಚಾರಣೆಗೆ ರಾಜ್ಯ ಚುನಾವಣಾ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಇದಲ್ಲದೆ, ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಿದೆ. ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು ಎಂದು ಹೇಳಿದೆ. ಮತದಾರರ ಪರಿಷ್ಕರಣೆಗೆ ಡಿ.24 ರ ವರೆಗೆ ಸಮಯ ವಿಸ್ತರಣೆ ಮಾಡಿದೆ.
ಬಿಬಿಎಂಪಿಯ ಹೊರಗಿನ ವಿಶೇಷ ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನೇಮಿಸಬೇಕು. ಮತದಾರರ ಪಟ್ಟಿಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಬೇಕು. ಅಕ್ರಮವಾಗಿ ಯಾವುದೇ ನೇರ ಅಥವಾ ಪರೋಕ್ಷ ಬಳಕೆಯನ್ನು ಖಚಿತಪಡಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳು ದಾಖಲೆ ಸಂಗ್ರಹಿಸಿರುವ ಬಗ್ಗೆ ಪತ್ತೆಹಚ್ಚಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಕೊಟ್ಟಿದೆ.
ಇದಲ್ಲದೆ, ಹೊಸತಾಗಿ ವೋಟರ್ ಐಡಿ ಪರಿಷ್ಕರಣೆ ಬಗ್ಗೆ ನಿಗಾ ವಹಿಸಲು ಏಳು ಜನ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನಿಖೆಗೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾದೇವಪುರ ವಲಯಕ್ಕೆ ಅಜಯ್ ನಾಗಭೂಷಣ್ ಹಾಗೂ ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಅವರನ್ನು ನೇಮಿಸಿದೆ.
Voter ID scam BBMP Commissioner and Bengaluru DC Suspend, Probe ordered by Election commission.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm