ಬ್ರೇಕಿಂಗ್ ನ್ಯೂಸ್
08-12-22 07:47 pm HK News Desk ಕರ್ನಾಟಕ
ಮೈಸೂರು, ಡಿ.8 : ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿಯವರೇ ಫಂಡ್ ಮಾಡಿದ್ದಾರೆ. ಕಾಂಗ್ರೆಸ್ ಮತ ವಿಭಜನೆಗಾಗಿ ಆಪ್ ಪಕ್ಷಕ್ಕೆ ಬಿಜೆಪಿ ಫಂಡ್ ಮಾಡಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಗುಜರಾತ್ ನಲ್ಲಿ ಬಿಜೆಪಿ ಬರುತ್ತೆ ಅಂತ ನಿರೀಕ್ಷೆ ಇತ್ತು. ಆದರೆ ಇಷ್ಟೊಂದು ಲೀಡ್ ಬರುವುದಕ್ಕೆ ಆಪ್ ಸ್ಪರ್ಧೆ ಕಾರಣ. ಆಪ್ ಪಡೆದ ಮತಗಳೆಲ್ಲಾ ಕಾಂಗ್ರೆಸ್ ನದ್ದು. ಆದರೆ ಒಂದು ರಾಜ್ಯದ ಚುನಾವಣಾ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀಸಲ್ಲ. ಅಲ್ಲಿನ ರಿಸಲ್ಟ್ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಇಲ್ಲಿಯ ಬಿಜೆಪಿ ಸರಕಾರ ಅತಿ ಭ್ರಷ್ಟ ಸರಕಾರ. ಕಾಂಗ್ರೆಸ್ ಸಂಘಟನೆ ಇಲ್ಲಿ ಶಕ್ತಿಯುತವಾಗಿದೆ. ಗುಜರಾತ್ ಅನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಬೇಡಿ. ಕರ್ನಾಟಕ ಬಿಜೆಪಿಗೆ ತಾವು ಸೋಲುತ್ತೇವೆ ಎಂಬುದು ಗೊತ್ತಿದೆ. ಹಾಗಾಗಿ ಜೆಡಿಎಸ್ ಜೊತೆ ಸೇರಿ ಇಲ್ಲಿಯೂ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ ಅದು ಇಲ್ಲಿ ನಡೆಯಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್ ನಲ್ಲಿ 40% ಸರಕಾರ ಇತ್ತು ಅಂತಾ ಯಾರಾದರೂ ಹೇಳಿದ್ರಾ? ಕರ್ನಾಟಕದ್ದು ಹೇಳಿದ್ರಾ? ಅಷ್ಟು ದುಡ್ಡು ಖರ್ಚು ಮಾಡಿದರೂ ಆಪ್ 6 ಸ್ಥಾನ ಪಡೆದಿದೆ. ಮತ ವಿಭಜನೆ ಆಗಿದ್ದು ಅವರಿಂದ ಅಷ್ಟೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರೂ ಗೆಲ್ಲುತ್ತೆ. ನಾವು ಏನೂ ತಂತ್ರಗಾರಿಕೆ ಮಾಡುವುದೇ ಬೇಡ ಎಂದು ಹೇಳಿದ ಸಿದ್ದರಾಮಯ್ಯ, ಮೋದಿ ಹವಾ ಎಲ್ಲಿಯೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಯಾಕೆ ಸೋಲ್ತಿದ್ದರು. ಎಲ್ಲಿ ಹೋಯ್ತು ಮೋದಿ ಹವಾ ಎಂದು ಕೇಳಿದರು.
ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕೇಳಿದ್ದಕ್ಕೆ, ಈ ಬಗ್ಗೆ ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯವೂ ಕರ್ನಾಟಕ ಬಿಜೆಪಿಗೆ ಇಲ್ಲ. ಕರ್ನಾಟಕ ಬಿಜೆಪಿಯವರು ಹೇಡಿಗಳು. ಎರಡು ಕಡೆ ಬಿಜೆಪಿ ಸರಕಾರ ಇದ್ದರೂ ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ.?
ಇಬ್ಬರು ಮಾತಾಡಿಸಿಕೊಂಡೇ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗುವಂತೆ ಮಾಡುತ್ತಿದ್ದಾರಾ? ಗಡಿ ವಿವಾದದ ಬಗ್ಗೆ ಒಳ್ಳೆ ಲಾಯರ್ ಇಟ್ಟು ವಾದ ಮಾಡಿಸಬೇಕು. ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ನಮ್ಮದ್ದು. ಒಂದಿಂಚೂ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದರು ಸಿದ್ದರಾಮಯ್ಯ.
Former Karnataka Chief Minister Siddaramaiah on Thursday alleged the BJP funded the Aam Aadmi Party (AAP) in Gujarat to divide the Congress votes. As the saffron party is set to return to power for the seventh time in a row, the Congress stalwart in Karnataka said the fledgling party splurged huge money in the Gujarat elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm