ಬ್ರೇಕಿಂಗ್ ನ್ಯೂಸ್
23-12-22 02:37 pm HK News Desk ಕರ್ನಾಟಕ
ಬೆಂಗಳೂರು, ಡಿ.23: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದು ಮಹತ್ವದ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಕೋವಿಡ್ ಲಕ್ಷಣವುಳ್ಳ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಕೋವಿಡ್ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ಒಳಪಡಿಸಲು ಅಗತ್ಯ ಸಂಖ್ಯೆಯ ಟೀಂಗಳನ್ನು ಬಿಬಿಎಂಪಿ ಹಾಗೂ ಜಿಲ್ಲೆಗಳು ಕಾರ್ಯೋನ್ಮುಖಗೊಳಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ, ಅಂತರ ರಾಷ್ಟ್ರೀಯ ಪ್ರಯಾಣಿಕರ ಪೈಕಿ ಶೇ.2 ಅಂದರೆ ನಿರ್ದಿಷ್ಟ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಜೊತೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ಹೇಳಿದೆ.
ಎಲ್ಲಾ ಕೋವಿಡ್-19 ಪಾಸಿಟಿವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಡ್ಡಾಯವಾಗಿ ಕಳುಹಿಸಬೇಕು. ಕೋವಿಡ್ ಹೆಚ್ಚಳದ ಕಾರಣ ಎಲ್ಲಾ ಹಂತಗಳಲ್ಲೂ ಲಸಿಕಾಕರಣದ ಕ್ಯಾಂಪ್ ಆಯೋಜಿಸುವಂತೆ ತಿಳಿಸಿದೆ.
ಸಾರ್ವಜನಿಕರು ಹಾಗೂ ಸಭೆ, ಸಮಾರಂಭಗಳ ಆಯೋಜಕರಿಗೂ ಕೋವಿಡ್ ನಿಯಂತ್ರಣ ಸಲಹೆಯನ್ನು ಮಾಡಲಾಗಿದ್ದು ಮುಚ್ಚಿದ ಕೋಣೆಯ ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ.
ಅರ್ಹರೆಲ್ಲರೂ ಕೋವಿಡ್ ಲಸಿಕೆಯ ಫ್ರಿಕಾಶನರಿ ಡೋಸ್ ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟ ಸಮಸ್ಯೆ ಇರೋರು, ಕೋವಿಡ್ ಸೋಂಕಿನ ಲಕ್ಷಣ ಹೊಂದಿರೋರು, ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದೆ.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದಲ್ಲದೇ, ದೈಹಿಕ ಅಂತರವನ್ನು ಪಾಲಿಸುವಂತೆ ತಿಳಿಸಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಹೇಳಿದೆ.
The Karnataka government on Thursday decided to conduct mandatory testing of Influenza Like Illness (ILI) and Severe Acute Respiratory Illness (SARI) in the state amid a spurt in COVID-19 cases in some parts of the world, including China.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm