ಬ್ರೇಕಿಂಗ್ ನ್ಯೂಸ್
26-12-22 10:27 pm HK News Desk ಕರ್ನಾಟಕ
ಹಾಸನ, ಡಿ.26 : ಹಾಸನದ ಕೊರಿಯರ್ ಶಾಪ್ ನಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿಯೊಂದು ಬ್ಲಾಸ್ಟ್ ಆಗಿದ್ದು ಕಚೇರಿಯಲ್ಲಿದ್ದ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ಫೋಟ ನಡೆದಿರುವುದು ಆತಂಕ ಮೂಡಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ಮಿಕ್ಸಿ ಪಾರ್ಸಲ್ ಬಂದಿದ್ದು, ಅದನ್ನು ಹಾಸನ ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್ ಕಚೇರಿಗೆ ವ್ಯಕ್ತಿ ಬಾಕ್ಸನ್ನು ವಾಪಸ್ ನೀಡಿದ್ದರು. ವಾಪಸ್ ಪಡೆಯುವ ವೇಳೆ ಮಿಕ್ಸಿಯನ್ನು ಕೊರಿಯರ್ ಕಚೇರಿಯ ಶಶಿ ಎಂಬವರು ಆನ್ ಮಾಡಿ ಪರಿಶೀಲನೆ ನಡೆಸಿದ್ದು ಆನ್ ಮಾಡಿದ ಬೆನ್ನಲ್ಲೇ ಮಿಕ್ಸಿ ಬ್ಲಾಸ್ಟ್ ಆಗಿದ್ದು ಸ್ಫೋಟದ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿ ಪುಡಿಯಾಗಿದೆ. ಗೋಡೆಗೂ ಹಾನಿಯಾಗಿದೆ.





ಹಾಸನ ನಗರದ ಕೆ.ಆರ್ ಪುರಂನ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶಂಕಾಸ್ಪದ ಬ್ಲಾಸ್ಟ್ ವದಂತಿಗಳು ಹರಡುತ್ತಿವೆ. ಕೊರಿಯರ್ ಶಾಪ್ ಸಿಬಂದಿ ಶಶಿ ಬಲಗೈ ಛಿದ್ರಗೊಂಡಿದ್ದು ಹೊಟ್ಟೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಬ್ಲಾಸ್ಟ್ ಗೆ ಏನು ಕಾರಣ ಇದೆ ಎಂದು ಕಂಡುಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ತಂಡ ಬರುತ್ತಾರೆ. ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನೋ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕಿಟ್ ಆಗಿದೆಯೋ ಬೇರೆ ಏನಾದ್ರು ಇದೆಯೋ ಪರಿಶೀಲನೆ ನಡೆಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
An incident took place where a parcel arrived at a courier shop in Hassan and a mixie blasted. Two days ago, the mixed parcel arrived at the DTDC Courier Shop on the Sub-Register Office Road of KR Puram Barangay of Hassan Nagar. Now there is a mixi blast and the owner of the courier, Shashi, has been seriously injured and admitted to a private hospital in Hassan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm