ಬ್ರೇಕಿಂಗ್ ನ್ಯೂಸ್
03-01-23 01:27 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಯಲಿ, ಸಾಕ್ಷಿನಾಶ ಆಗದಂತೆ ತಡೆಯಲು ಶಾಸಕ ಅರವಿಂದ ಲಿಂಬಾವಳಿ ಅವರನ್ನು ಪೊಲೀಸರು ಬಂಧಿಸಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಎರಡು ದಿನದ ಹಿಂದೆ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ಕೆಪಿಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರೊಂದಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪತ್ನಿ ಪ್ರದೀಪ್‌ಗೆ ನ್ಯಾಯ ಕೊಡಿಸಿ ಎಂದು ಅವರ ಪತ್ನಿ ಹೇಳಿದ್ದಾರೆ. 1.5 ಕೋಟಿ ರೂ. ಹೂಡಿಕೆ ಮಾಡಿದ್ದೆವು, ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಎನ್ನುವುದು ಇವರ ವಾದ.

ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್‌ಗೆ ಪ್ರಯತ್ನ ಮಾಡಿದ್ದಾರೆ. ಡೆತ್ ನೋಟ್‌ನಲ್ಲಿ 6 ಜನರ ಹೆಸರು ಇದೆ. ಲಿಂಬಾವಳಿ ಹೆಸರೂ ಇದೆ. ಈಗಾಗಲೇ ಎಫ್‌ಐಆರ್ ದಾಕಲಾಗಿದ್ದು, ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು.
ಕೂಡಲೇ ಎಲ್ಲರನ್ನೂ ಬಂಧಿಸಬೇಕು. ಸಾವಿಗೆ ಕಾರಣವಾದರ ಮೇಲೆ ಕಾನೂನು ಕ್ರಮ ಆಗಬೇಕು. ಶಿಕ್ಷೆ ಆಗುವಂತೆ ಮಾಡಬೇಕು. ಶಾಸಕರೇ ಇರಲಿ, ಯಾರೇ ಇರಲಿ, ತಪ್ಪು ಯಾರೇ ಮಾಡಿದರೂ ತಪ್ಪೆ. ಕಾನೂನು ಪ್ರಕಾರ ಕ್ರಮ ಆಗಬೇಕು. ಶಾಸಕರನ್ನೂ ಬಂಧನ ಮಾಡಬೇಕು. ಇಲ್ಲದೇ ಹೋದರೆ ಸಾಕ್ಷಿ ನಾಶ ಮಾಡಬಹುದು. ಪೊಲೀಸರು ಪ್ರದೀಪ್ ಅವರ ಮನೆಯವರ ಮೊಬೈಲ್ ಕೇಳುತ್ತಿದ್ದಾರಂತೆ. ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ, ಇದಕ್ಕೆ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಹೇಳಿದರು. 3 ತಿಂಗಳಲ್ಲಿ ಬಿ ರಿಪೋರ್ಟ್ ಕೊಟ್ಟರು. ಇದೇ ಪರಿಸ್ಥಿತಿ ಈ ಕೇಸ್‌ನಲ್ಲಿಯೂ ಆಗಬಾರದು. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಸರ್ಕಾರದ ಅವಧಿಯಲ್ಲಿ ಅನೇಕ ಜನ ಸಾಯುವುದು, ದಯಾ ಮರಣ ಕೋರುವುದು ಆಗುತ್ತಿದೆ. ಇದಕ್ಕೆ ಭ್ರಷ್ಟಾಚಾರ ಕಾರಣ. ಭ್ರಷ್ಟಾಚಾರದ ವಿರುದ್ದ ಕ್ರಮ ಆಗದೇ ಇರುವುದಕ್ಕೆ ಹೀಗೆ ಆಗುತ್ತಿದೆ. ಈ ಪ್ರಕರಣದಲ್ಲಿ ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದರು.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023
Businessman suicide case, Bjp MLA Limbavali should be arrested soon demands senior congress leader Siddaramaiah after he visited their residence to give his condolences.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm