ಬ್ರೇಕಿಂಗ್ ನ್ಯೂಸ್
04-01-23 10:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ರೌಡಿ ಶೀಟರ್ ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ನೆಟ್ಟಗಾಗಿದ್ದಾರೆ. 2018ರಲ್ಲಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇದೇ ವ್ಯಕ್ತಿ ಸಹಾಯ ಮಾಡಿದ್ದಾನೆ. ಈತನಿಗೂ ಬಿಜೆಪಿ ಸರ್ಕಾರದ ಹಲವು ಪ್ರಭಾವಿ ಸಚಿವರಿಗೆ ಹತ್ತಿರದ ನಂಟು ಇದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
2018ರಲ್ಲಿ ಸಮ್ಮಿಶ್ರ ಸರ್ಕಾರವವನ್ನು ಉರುಳಿಸಲು ಯಾರನ್ನೆಲ್ಲ ಬಳಕೆ ಮಾಡಿಕೊಳ್ಳಲಾಯಿತು..? ಬಾಂಬೆಗೆ ಹೋದವರ ಮೋಜು ಮಸ್ತಿಗೆ ಸಕಲ ವ್ಯವಸ್ಥೆ ಮಾಡಿದವರು ಯಾರು..? ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸ್ಯಾಂಟ್ರೋ ರವಿ ಮೇಲೆ ಕೇಸುಗಳು ಎಷ್ಟಿವೆ..? ಸ್ಯಾಂಟ್ರೋ ರವಿಗೆ ಐದು ಹೆಸರುಗಳಿವೆ. 1995 ರಿಂದಲೂ ಈತನ ಮೇಲೆ ಕೇಸುಗಳಿವೆ. ಮೈಸೂರು, ಬೆಂಗಳೂರುನಲ್ಲಿ ಎಷ್ಟೋ ಕೇಸ್ ಇವೆ..? ಕಳೆದ ತಿಂಗಳವರೆಗೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಇವನಿಗೆ ಕೊಠಡಿ ಕೊಟ್ಟವರು ಯಾರು? ಕೊಠಡಿ ಕೊಡುವಂತೆ ಯಾರು ಶಿಫಾರಸು ಮಾಡಿದ್ದರು? ಇದೆಲ್ಲವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕುಮಾರಕೃಪಾದಲ್ಲಿ ಕುಳಿತು ಈತ ಭಾರೀ ವ್ಯವಹಾರ ನಡೆಸಿದ್ದಾನೆ. ಇವನ ಹಿಂದೆ ಅಡಗಿ ಕೂತಿರುವ ಅಸಲಿ ವ್ಯಕ್ತಿ ಯಾರು? ಪೊಲೀಸ್ ಅಧಿಕಾರಿಗೆ ಇವನು ಮೊಬೈಲ್ ಕರೆ ಮಾಡಿ, ನಾಳೆ ಬಂದು ನೋಡು ಅಂತ ಹೇಳುತ್ತಾನೆ. ತನ್ನ ಸರ್ ಎಂದು ಕರೆಯುವಂತೆ ಆ ಪೊಲೀಸ್ ಅಧಿಕಾರಿಗೆ ತಾಕೀತು ಮಾಡುತ್ತಾನೆ. ಇದೆಲ್ಲಾ ದಾಖಲೆ ಇದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
17 ಜನ ಮಂತ್ರಿಗಳು ತಮ್ಮ ವಿರುದ್ಧ ಸುದ್ದಿವಾಹಿನಿಗಳಲ್ಲಿ ಕೆಲ ವಿಷಯಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ನಿಂದ ತಡೆಯಾಜ್ಞೆ ತಂದರಲ್ಲ, ಬಾಂಬೆಗೆ ಇಲ್ಲಿಂದ ಶಾಸಕರನ್ನು ಮೋಜು ಮಾಡಲು ಕರೆದುಕೊಂಡು ಹೋದರಲ್ಲ, ಈ ಡೋಂಗಿ ಬಿಜೆಪಿ ಎಲ್ಲರಿಗೂ, ಗೌರವ ಕೊಡುವ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರಲ್ಲ, ಹಾಗಾದರೆ, ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ಕೆಲವರನ್ನು ಕರೆದುಕೊಂಡು ಹೋದರಲ್ಲ, ಆ ವ್ಯಕ್ತಿ ಯಾರು..? ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಾರೆ, ಈ ವಿಷಯದಲ್ಲಿ ಅವರು ದಮ್ಮು ತಾಕತ್ತು ತೋರಿಸಲಿ. ಸ್ಯಾಂಟ್ರೋ ರವಿ ಮತ್ತು ತಮ್ಮ ಸಂಪುಟದ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಕೇಸರಿ ಶಾಲು ಹಾಕಿ ಪಕ್ಷಕ್ಕೆ ಸೇರಿಸಿಕೊಂಡವರಿಗೆ ನಾಚಿಕೆ ಆಗಬೇಕು !
ದಲಿತ ಕುಟುಂಬದ ಹೆಣ್ಣು ಮಗಳು ಇವನ ಮೇಲೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಇಂಥವನ ಹೆಗಲ ಮೇಲೆ ಕೇಸರಿ ಟವೆಲ್ ಹಾಕಿ ಪಕ್ಷಕ್ಕೆ ಸೇರಿಸಿಕೊಂಡ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು. ನಮ್ಮ ಮೇಲೆ ಟ್ರೋಲ್ ಮಾಡುವ ಬಿಜೆಪಿ ಸೋಷಿಯಲ್ ಮೀಡಿಯಾವರು, ದಮ್ಮು, ತಾಕತ್ತು ಇದ್ದರೆ ಈ ವಿಷಯವನ್ನು ಟ್ರೋಲ್ ಮಾಡಲಿ ಎಂದು ಕಿಡಿಕಾರಿದ್ದಾರೆ.

ಮಾಜಿ ಸಚಿವ ಲಿಂಬಾವಳಿ ಹೆಸರು ಬರೆದು ಸಾವನ್ನಪ್ಪಿದ ಘಟನೆ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ, ಅರವಿಂದ ಲಿಂಬಾವಳಿ ಹಾಗೂ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲ್ಪಟ್ಟಿರುವ ಗೋಪಿಗೆ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ. 'ನನಗಿರುವ ಮಾಹಿತಿ ಪ್ರಕಾರ ಗೋಪಿ ಮುಖಾಂತರ 50 ರಿಂದ 60 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಮುಖ್ಯವಾಗಿ ಬಿಲ್ಡರುಗಳಿಂದ ಹಣ ಕೀಳಲಾಗಿದೆ. ಈ ಕಾರಣಕ್ಕೆ ಲಿಂಬಾವಳಿ ಸಚಿವ ಸ್ಥಾನ ಕಳೆದುಕೊಂಡರಾ..? ಈ ಬಗ್ಗೆ ಜನರಿಗೆ ಗೊತ್ತಾಗಬೇಕು. ಬಿಲ್ದರುಗಳನ್ನು ದರ್ಜೇವಾರು ವಿಭಜಿಸಿ ಹಣ ವಸೂಲಿ ಮಾಡುತ್ತಿದ್ದರಲ್ಲ, ಆ ಹಣವನ್ನು ಸಂಗ್ರಹ ಮಾಡಿದವರು ಯಾರು..? ಯಾವ ಅಪಾರ್ಟ್ ಮೆಂಟ್ ನಲ್ಲಿ ಈ ವ್ಯವಹಾರ ನಡೆಯಿತು ಎನ್ನುವುದು ಜನಕ್ಕೆ ಗೊತ್ತಾಗಬೇಕಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ
What is the relationship between Santro Ravi, against whom the Mysore police has registered an FIR, and some influential ministers of the state BJP government? Former Chief Minister HD Kumaraswamy has demanded that a high-level investigation should be conducted in this regard.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm