ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.

ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್‌ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm