ಬ್ರೇಕಿಂಗ್ ನ್ಯೂಸ್
11-01-23 07:10 pm HK News Desk ಕರ್ನಾಟಕ
ದಾವಣಗೆರೆ, ಜ.11 : ರಾಜ್ಯ ಸರಕಾರದ 40 ಶೇಕಡಾ ಕಮಿಷನ್ ದಂಧೆಗೆ ತಾಯಿ, ಮಗ ಬಲಿಯಾಗಿದ್ದಾರೆಂದು ಸಂಬಂಧಿಕರು ದೂರಿದ್ದಾರೆ. ಬೆಂಗಳೂರಿನ ಮೆಟ್ರೋ ಕಾಮಗಾರಿಯ ವೇಳೆ ಪಿಲ್ಲರ್ ಕುಸಿದು ತಾಯಿ, ಮಗು ಬಲಿ ಆಗಿದ್ದರು. ಸಾವನ್ನಪ್ಪಿದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಶವವನ್ನು ದಾವಣಗೆರೆ ತರುತ್ತಿದ್ದಂತೆ ಆಕ್ರೋಶ ಮುಗಿಲು ಮುಟ್ಟಿತ್ತು.
ಮೆಟ್ರೋ ಕಾಮಗಾರಿಗೆ ಹಲವಾರು ಜನ ಬಲಿಯಾಗಿದ್ದಾರೆ. ತಮ್ಮ ಮಗಳು ಹಾಗೂ ಮೊಮ್ಮಗ ಬಲಿ ಆಗಿದ್ದು ಕಮಿಷನ್ ದಂಧೆಗೆ. ಗುತ್ತಿಗೆದಾರರ ಬಳಿ ಕಮಿಷನ್ ಪಡೆದು ಕಾಮಗಾರಿ ಮಾಡಿಸುತ್ತಾರೆ. ಇದೇ ಕಾರಣಕ್ಕೆ ಕಳಪೆ ಕಾಮಗಾರಿ ನಡೆಯುತ್ತದೆ ಎಂದು ಮೃತ ತೇಜಸ್ವಿನಿ ದೊಡ್ಡಪ್ಪ ರಾಘವೇಂದ್ರ ರಾವ್ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪರಿಹಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಯಾರಿಗೆ ಬೇಕು ಇವರ 20 ಲಕ್ಷ ರೂಪಾಯಿ ಪರಿಹಾರ. ಪರಿಹಾರ ಘೋಷಣೆ ಮಾಡಿದವರನ್ನ ಜೈಲಿಗೆ ಹಾಕಬೇಕು ಎಂದು ಹೇಳಿದರು. ಸಾವಿರಾರು ಜನರು, ಕುಟುಂಬಸ್ಥರ ಶೋಕ, ಆಕ್ರೋಶದ ನಡುವೆ ತಾಯಿ ಮತ್ತು ಮಗುವಿನ ಮೃತದೇಹವನ್ನು ಪ್ರತ್ಯೇಕವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.

ಮೂವರು ಇಂಜಿನಿಯರ್ ಅಮಾನತು
ಇದೇ ವೇಳೆ, ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ. ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಮೆಟ್ರೋ ಡೆಪ್ಯುಟಿ ಚೀಫ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್, ಸೆಕ್ಷನ್ ಎಂಜಿನಿಯರ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ಅಂಜುಂ ಫರ್ವೇಜ್ ತಿಳಿಸಿದ್ದಾರೆ.

ಇದೇ ವೇಳೆ, ಬೆಂಗಳೂರು ಮೆಟ್ರೋ ಕಾಮಗಾರಿ ದುರಂತ ಪ್ರಕರಣವು ಕೇಂದ್ರದ ಅಂಗಳ ತಲುಪಿದೆ. ಪ್ರಕರಣ ಸಂಬಂಧ ವರದಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ವರದಿ ಕೇಳಿದೆ. ಘಟನೆ ಹಿನ್ನೆಲೆಯಲ್ಲಿ ಎಂಟು ಮಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
A woman and her two-and-a-half-year-old son died when a structure at a Namma Metro construction site fell on them at Nagawara on January 10, Tuesday, morning. According to the police, the two victims were on a two-wheeler with the father and the other child, who escaped with injuries. Around 10.45 a.m., a Namma Metro structure collapsed and hit a bike on which Lohith, his wife Tejaswini, and their twins (a son and a daughter) were travelling. “Tejaswini and son Vihan were seriously injured and shifted to a private hospital.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm