ಬ್ರೇಕಿಂಗ್ ನ್ಯೂಸ್
13-01-23 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಟ್ರೋ ರವಿ ಕೊನೆಗೂ 11 ದಿನಗಳ ಬಳಿಕ ಗುಜರಾತ್‌ನಲ್ಲಿ ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮಂಡ್ಯ ಮೂಲದ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಮೈಸೂರಿನಲ್ಲಿ ಕೇಸು ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ 11 ದಿನಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಕಾರ್ಯಾಚರಣೆ ನಡೆಸಿದ್ದ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಯಾಂಟ್ರೋ ರವಿ ತಪ್ಪಿಸಿಕೊಂಡಿದ್ದ. ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧನ ಮಾಡಲು ಕರ್ನಾಟಕ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದರು.

ಹತ್ತು ದಿನಗಳಾದರೂ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸುವುದು ಸವಾಲಾಗಿತ್ತು. ಬಂಧಿಸಲೇ ಬೇಕು ಎಂದು ಪಣ ತೊಟ್ಟಿದ್ದ ಕರ್ನಾಟಕ ಪೊಲೀಸರು, ಆತನ ಸೆರೆಗೆ ನಾಲ್ವರು ಎಸ್ಪಿಗಳ ವಿಶೇಷ ತಂಡ ರಚನೆ ಮಾಡಿದ್ದರು. ಈ ತಂಡ ಹಗಲಿರುಳೂ ಸ್ಯಾಂಟ್ರೋ ರವಿ ಪತ್ತೆಗಾಗಿ ಹುಡುಕಾಟ ನಡೆಸಿತ್ತು. ಈ ನಡುವೆ ಸ್ಯಾಂಟ್ರೋ ರವಿ ಗುಜರಾತ್ ತಲುಪಿದ್ದಾನೆ ಎಂಬ ಸುಳಿವು ಸಿಕ್ಕ ಕೂಡಲೇ ಅಲ್ಲಿಗೆ ಧಾವಿಸಿದ ಪೊಲೀಸರ ವಿಶೇಷ ತಂಡ, ಆತನನ್ನು ಬಂಧನ ಮಾಡಿದೆ. ಇದೀಗ ಸ್ಯಾಂಟ್ರೋ ರವಿಯನ್ನು ಕರ್ನಾಟಕಕ್ಕೆ ಕರೆತರಲಾಗುತ್ತಿದೆ.
ಈ ಹಿಂದೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲೂ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಮಫ್ತಿಯಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲೂ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡಿದ್ದ ಎಂದು ಎನ್ನಲಾಗಿದೆ.
Hightech pimp Santro Ravi arrested after 11 days at Gujarat by Karnataka police. K. S. Manjunath, an alleged human trafficker popularly known as ‘Santro Ravi’ who is in the eye of a storm over his alleged role in police transfers and links to several politicians of the ruling BJP in Karnataka, was arrested in Gujarat, on January 13.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm