ಬ್ರೇಕಿಂಗ್ ನ್ಯೂಸ್
15-01-23 01:28 pm HK News Desk ಕರ್ನಾಟಕ
ಬೆಳಗಾವಿ, ಜ.15 : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದುಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜಯೇಶ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು ಜೈಲು ಒಳಗಿನಿಂದಲೇ ಸಚಿವರ ಕಚೇರಿಗೆ ಕರೆ ಮಾಡಿದ್ದಾನೆ.
ಜೈಲು ಕೈದಿಯಾಗಿರುವ ಜಯೇಶ್, ಅಕ್ರಮವಾಗಿ ಫೋನ್ ಬಳಸಿ ಈ ಕೃತ್ಯವನ್ನು ಎಸಗಿದ್ದಾನೆ. ಈ ಸಂಬಂಧ ನಾಗ್ಪುರ ಪೊಲೀಸರು ತನಿಖೆಗಾಗಿ ಬೆಳಗಾವಿಗೆ ತೆರಳಿದ್ದಾರೆ. ಆರೋಪಿಯನ್ನು ಪ್ರೊಡಕ್ಷನ್ ರಿಮಾಂಡ್ ನೀಡಲು ಕೇಳಿಕೊಂಡಿದ್ದೇವೆ ಎಂದು ನಾಗ್ಪುರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದಾರೆ.
ಜಯೇಶ್ ಕುಮಾರ್ ಪುತ್ತೂರಿನ ಕೊಲೆ ಪ್ರಕರಣ ಒಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದಾನೆ. ಈ ಹಿಂದೆ ಜೈಲಿನಲ್ಲೇ ಇದ್ದುಕೊಂಡು ಎಡಿಜಿಪಿ ಅಲೋಕ್ ಕುಮಾರ್ ಅವರಿಗೂ ಜೀವ ಬೆದರಿಕೆ ಕರೆಯನ್ನು ಮಾಡಿ ಸುದ್ದಿಯಾಗಿದ್ದ. ಆರೋಪಿಯ ಬಳಿ ಡೈರಿ ಪತ್ತೆಯಾಗಿದ್ದು, ಅದರಲ್ಲಿ ಸಚಿವರ ಕಚೇರಿಯ ನಂಬರ್ ಸೇರಿದಂತೆ ಹಲವು ನಂಬರ್ ಗಳಿದ್ದವು. ಸದ್ಯ ಡೈರಿಯನ್ನು ವಶಕ್ಕೆ ಪಡೆದಿದ್ದು, ಮೊಬೈಲ್ ಪತ್ತೆಯಾಗಿಲ್ಲ.
ಜಯೇಶ್, ಸಚಿವರ ನಾಗಪುರ ಕಚೇರಿಗೆ ಶನಿವಾರ ಬೆಳಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಕರೆ ಮಾಡಿ, ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯನೆಂದು ಹೇಳಿ 100 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ. ಇದಾದ ಬಳಿಕ ಸಚಿವರ ನಿವಾಸದ ಸುತ್ತ ಭದ್ರತೆ ಹೆಚ್ಚಿಸಲಾಗಿತ್ತು. ತನಿಖೆ ನಡೆಸಿದ ಭಯೋತ್ಪಾದನೆ ವಿರೋಧಿ ದಳ ಬೆಳಗಾವಿಗೆ ಬಂದಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಿದ್ದಾರೆ.
Union Road Transport and Highways Minister Nitin Gadkari received death threat calls from a man who is imprisoned in Belagavi, Karnataka. Nagpur police traced the caller on Saturday. The caller has been identified as Jayesh Kantha. "Union Minister Nitin Gadkari was being threatened from jail. The caller is a notorious gangster and murder accused Jayesh Kantha, who is imprisoned in Belagavi jail. He threatened Gadkari's office by using the phone illegally inside the jail," Amitesh Kumar, Commissioner of Police, Nagpur, said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm