ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm