ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್‌ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm