ಬ್ರೇಕಿಂಗ್ ನ್ಯೂಸ್
23-01-23 05:22 pm HK News Desk ಕರ್ನಾಟಕ
ಹಾವೇರಿ, ಜ.23: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳಿಗೆ ಈಗ ಮತದಾರನೇ ಮನೆ ದೇವರು. ಹೇಗಾದರೂ ಮತ್ತೆ ಗೆದ್ದು ಬರಬೇಕೆಂಬ ಗುಂಗಿನಲ್ಲಿ ಮತದಾರನ ಓಲೈಕೆಗೆ ತೊಡಗಿದ್ದಾರೆ. ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಪಕ್ಷೇತರ ಶಾಸಕ, ಮಾಜಿ ಸಚಿವ ಆರ್.ಶಂಕರ್ ಮತದಾರರಿಗೆ ಕುಕ್ಕರ್ ಕೊಡಲು ಶುರು ಮಾಡಿದ್ದಾರೆ.
ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಜನತೆಗೆ ಆರ್. ಶಂಕರ್ ಕುಕ್ಕರ್ ಗಿಫ್ಟ್ ಕೊಟ್ಟಿದ್ದಾರೆ. ಮನೆ ಮನೆಗೆ ತೆರಳಿ ಶಂಕರ್ ಬೆಂಬಲಿಗರು ಕೂಪನ್ ನೀಡುತ್ತಿದ್ದು, ಅದನ್ನು ನಿಗದಿತ ಅಂಗಡಿಯಲ್ಲಿ ತೋರಿಸಿದರೆ ಕುಕ್ಕರ್ ಉಚಿತ ಸಿಗುತ್ತದೆ.
"ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಆರ್ ಶಂಕರ್" ಅಂತ ಕುಕ್ಕರ್ ಮೇಲೆ ಬರೆದಿದ್ದು ಅದನ್ನು ರಹಸ್ಯವಾಗಿ ಹಂಚಿಕೆ ಮಾಡಲಾಗುತ್ತಿದೆ. ಬಿಜೆಪಿ ಎಂ.ಎಲ್ ಸಿ, ಮಾಜಿ ಸಚಿವ ಆರ್ ಶಂಕರ್ ಈ ಬಾರಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಓಕೆ, ಇಲ್ಲದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ರೆಡಿಯಾಗಿದ್ದಾರೆ.

ಈ ನಡುವೆ, ಆರ್. ಶಂಕರ್ ಕಾಂಗ್ರೆಸ್ ಸೇರ್ತಾರೆ ಅನ್ನೋ ಸುದ್ದಿಯೂ ಜೋರಾಗೇ ಹರಿದಾಡ್ತಿದೆ. ಕಳೆದ 2018 ರ ವಿಧಾನ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಹೆಸರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಚುನಾವಣೆ ಬಳಿಕ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾಗ ಶಂಕರ್ ಬೆಂಬಲ ನೀಡಲು ಮುಂದಾಗಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಲ್ಲದೆ, ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆಗೆ ವಿಲೀನಗೊಳಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಅಬಕಾರಿ ಸಚಿವ ಖಾತೆಯನ್ನೂ ಪಡೆದಿದ್ದರು. ಆದರೆ, ಬಳಿಕ ಬಿಜೆಪಿ ದಾಳಕ್ಕೆ ಸಿಲುಕಿ ಆಪರೇಷನ್ ಕಮಲಕ್ಕೊಳಗಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಶಂಕರ್ ಬಿಜೆಪಿಗೆ ಸೇರ್ಪಡೆಗೊಂಡರೂ ಉಪ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಯಡಿಯೂರಪ್ಪ ಮಾತ್ರ ಅವರನ್ನು ಸಚಿವರನ್ನಾಗಿಸುವ ನೀಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯನಾಗಿ ಮಾಡಿದ್ದರು. ಆದರೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದರು.
ಹೀಗಾಗಿ ಅತ್ತಲೂ ಇಲ್ಲ ಇತ್ತಲೂ ಎಂಬಂತಾಗಿ ರಾಜಕೀಯ ದಾಳಕ್ಕೆ ಸಿಲುಕಿ ಕಂಗಾಲಾಗಿದ್ದರು. ಇದೀಗ ಮತ್ತೆ ರಾಣೆಬೆನ್ನೂರು ಅಖಾಡಕ್ಕೆ ಧುಮುಕಲು ಶಂಕರ್ ರೆಡಿಯಾಗಿದ್ದು ಕಾಂಗ್ರೆಸ್, ಬಿಜೆಪಿ ಯಾರು ಸೀಟು ಕೊಟ್ಡರೂ ಸೈ ಎನ್ನುವ ಇರಾದೆಯಲ್ಲಿದ್ದಾರೆ. ಎಲ್ಲಿಯೂ ಸಿಗದಿದ್ದರೆ ಪಕ್ಷೇತರನಾಗಿಯೇ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.
Cooker politics, R Shankar distributes free cooker with his pictures to voters in Haveri.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm