ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್‌ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್‌ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್‌ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್‌ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm