ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm