ಬ್ರೇಕಿಂಗ್ ನ್ಯೂಸ್
03-02-23 11:33 am Bangalore Correspondent ಕರ್ನಾಟಕ
ಬೆಂಗಳೂರು, ಫೆ.3: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕರ ಒಳಗಿನ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡೆಗೆ ಬೇಸತ್ತ ಚುನಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸಮಿತಿಯಲ್ಲಿ ಚರ್ಚಿಸದೆ, ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ತಮ್ಮದೇ ಭರವಸೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಹೀಗಾಗಿ ನಾಮಕೆವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಹಿರಿಯ ನಾಯಕ ಪರಮೇಶ್ವರ್ ರಾಜೀನಾಮೆ ಪತ್ರ ಬರೆದು ನೀಡಿದ್ದಾರೆ ಎನ್ನಲಾಗಿದೆ.
ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣ. ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದರು ಎಂಬುದು ಮಾಹಿತಿ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಅಷ್ಟೇ ಏಕೆ, ಡಿಸಿಎಂ, ಪ್ರಬಲ ಖಾತೆಗಳನ್ನೂ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ನನ್ನದೇ ಆದ ಕೊಡುಗೆ ಇದೆ. ಪ್ರಸ್ತುತ ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದೇನೆ. ಆದರೂ ತನ್ನನ್ನು ಕಡೆಗಣಿಸಿ ಉಚಿತ ಯೋಜನೆಗಳನ್ನು ನಾಯಕರೇ ಘೋಷಣೆ ಮಾಡುತ್ತಿದ್ದಾರೆಂದು ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪರಮೇಶ್ವರ್ ರಾಜಿನಾಮೆ ಪಕ್ಷದ ಒಳಗಡೆ ಭಿನ್ನವಾದ ಸಂದೇಶ ಹೋಗಲಿದೆ ಎಂಬುದನ್ನು ಅರಿತ ಸುರ್ಜೇವಾಲಾ, ಪರಮೇಶ್ವರ್ ಅವರನ್ನು ಮನವೊಲಿಸಿದ್ದಾರೆ. ಪ್ರಬಲ ದಲಿತ ವರ್ಗಕ್ಕೆ ಸೇರಿರುವ ಪರಮೇಶ್ವರ್ ರಾಜಿನಾಮೆ ಪಕ್ಷದ ಕಾರ್ಯಕರ್ತರ ನಡುವೆ ಭಿನ್ನವಾದ ಸಂದೇಶ ನೀಡುವುದರಿಂದ ಅವರನ್ನು ಮನವೊಲಿಸಿ ಆ ಹುದ್ದೆಯಲ್ಲೇ ಮುಂದುವರಿಸುವ ಸಾಧ್ಯತೆಯಿದೆ.
Simmering discontent has reportedly erupted the congress party in the state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm