ಬ್ರೇಕಿಂಗ್ ನ್ಯೂಸ್
05-02-23 02:56 pm HK News Desk ಕರ್ನಾಟಕ
ಕೊಪ್ಪಳ, ಫೆ.5 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಕಾರ್ಕಳದಲ್ಲಿ ಚುನಾವಣೆ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ರಾಜ್ಯದ 224 ಕ್ಷೇತ್ರಕ್ಕೂ ಸ್ಪರ್ಧಿಸಲಿದೆ. ಚುನಾವಣೆ ಹತ್ತಿರ ಬರಲಿ, ಎಲ್ಲವೂ ಗೊತ್ತಾಗಲಿದೆ ಎಂದ ಅವರು, ಮುತಾಲಿಕ್ ಸ್ಪರ್ಧೆಯಿಂದ ಹಿಂದು ಪರ ಇರುವ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ. ಇದನ್ನು ಅವರು ತಿಳಿದುಕೊಳ್ಳಬೇಕು. ಬಿಜೆಪಿ ಸರಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 18 ಹಿಂದು ಕಾರ್ಯಕರ್ತರ ಹತ್ಯೆಯಾಗಿತ್ತು. ಇವರು ಬಿಜೆಪಿ ವಿರುದ್ಧ ಸ್ಪರ್ಧಿಸಿದರೆ ಯಾರಿಗೆ ಲಾಭ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.
ಬಿಜೆಪಿ ಸರಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ ಬಂದಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಹಿಜಾಬ್ ಕುರಿತು ಕಾಯ್ದೆ ರೂಪಿಸಿದ್ದೇವೆ. ಹಿಂದು ಪರ ಇದ್ದೇವೆ ಎನ್ನುವುದನ್ನು ಕೆಲಸದ ಮೂಲಕ ತೋರಿಸಿದ್ದೇವೆ ಎಂದರು.
ರಾಜ್ಯಕ್ಕೆ ಪದೇ ಪದೇ ಮೋದಿ ಬರುವುದು ಯಾಕೆಂಬ ಪ್ರತಿಪಕ್ಷಗಳ ಟೀಕೆಗೆ, ರಾಜ್ಯಕ್ಕೆ ಮುಂದಿನ ದಿನಗಳಲ್ಲಿ 10 ಬಾರಿ ಬರುತ್ತಾರೆ. ಅದರಲ್ಲಿ ತಪ್ಪೇನು. ಮೋದಿ ನಮ್ಮ ಪರಮೋಚ್ಛ ನಾಯಕರು. ನಾವು ಚುನಾವಣೆ ಗೆಲ್ಲಲೇಬೇಕು. ಅದಕ್ಕಾಗಿ ಮೋದಿ ಕರೆಸ್ತೀವಿ. ಆದರೆ ಸಿದ್ದರಾಮಯ್ಯ ಮೊದಲು ತಮ್ಮ ಕ್ಷೇತ್ರ ಯಾವುದು ಎಂದು ಖಚಿತ ಪಡಿಸಿಕೊಳ್ಳಲಿ. ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸುನಿಲ್ ಕುಮಾರ್ ಟೀಕಿಸಿದ್ದಾರೆ.
A few days after Sri Rama Sene chief, Pramod Muthalik demanded BJP to field for him instead of BJP's own candidate, the current State Minister for Energy, Kannada and Culture, V Sunil Kumar addressed the issue. Pramod Muthalik had stated that he would be contesting from Karkala constituency for the upcoming assembly election as an independent candidate.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm