ಬ್ರೇಕಿಂಗ್ ನ್ಯೂಸ್
07-02-23 04:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7 : ಪ್ರಲ್ಹಾದ ಜೋಶಿ ಹೆಸರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಕೀಳುಮಟ್ಟದ ಹೇಳಿಕೆಯನ್ನು ಈವರೆಗೆ ಆಡಿದ್ದಿಲ್ಲ, ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದರು.

ಈ ರೀತಿ ಹೇಳಿಕೆ ನೀಡಿ, ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗರನ್ನು ಬಿಜೆಪಿಯಿಂದ ದೂರ ಮಾಡಬಹುದು ಎಂಬ ಅವರ ಟ್ರಿಕ್ ಕೆಲಸ ಮಾಡಲ್ಲ. ಜನರಿಗೆ ಕುಮಾರಸ್ವಾಮಿ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರ ಆಟ ನೋಡುತ್ತಾ ಇದ್ದಾರೆ ಎಂದರು.
ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿರುವವರು. ನಮ್ಮ ಪಕ್ಷದಲ್ಲಿರುವ ಪ್ರತಿಯೊಬ್ಬ ಕನ್ನಡಿಗನಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರಿಗೆ ಅರ್ಹತೆ ಮತ್ತು ಅವಕಾಶ ಇದೆ ಹೇಳಲಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅರುಳು ಮರುಳಾದವರಂತೆ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಯವರನ್ನು ನಾಯಿ ಮರಿಗೆ ಹೋಲಿಸುತ್ತಾರೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಜೋಕರ್ ಎನ್ನುತ್ತಾರೆ. ಉಗ್ರ ಭಾಷಣಗಳ ಮೂಲಕ ಉಗ್ರವಾದಿಯೇ ಆಗುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.
Except Kumaraswamy no one has the opportunity to be the CM from JDS slams Ashwath Narayan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm