ಬ್ರೇಕಿಂಗ್ ನ್ಯೂಸ್
20-02-23 09:06 pm Bengaluru Correspondent ಕರ್ನಾಟಕ
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ತಾರಕಕ್ಕೇರಿದ್ದು, ಇಂದು ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
ವಿಧಾನಸೌಧಕ್ಕೆ ಆಗಮಿಸಿದ ರೋಹಿಣಿ ಸಿಂಧೂರಿ ಅವರು ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರನ್ನು ಭೇಟಿ ಮಾಡಿ ದೂರು ಸಲ್ಲಿಕೆ ಮಾಡಿದ್ದಾರೆ. ಮನೆಯಿಂದ ನೇರವಾಗಿ ವಿಧಾನ ಸೌಧಕ್ಕೆ ತೆರಳಿದ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿಯಾಗಿ ರೂಪಾ ವಿರುದ್ಧ ದೂರು ಸಲ್ಲಿಸಿದರು. ರೋಹಿಣಿ ಅವರನ್ನು ಮಾಧ್ಯಮ ಹಾಗೂ ಸಾರ್ವಜನಿಕರನ್ನು ಸುತ್ತುವರಿದ ಕಾರಣ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.
ಸಿಂಧೂರಿ ದೂರಿನಲ್ಲಿ ಏನಿದೆ ?
ಡಿ.ರೂಪಾ ತಮ್ಮ ವಿರುದ್ಧ ಆಧಾರ ರಹಿತ ಆರೋಪಗಳನ್ನ ಮಾಡ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಸೋಷಿಯಲ್ ಮೀಡಿಯಾ ಲಿಂಕ್ ನೀಡಲಾಗಿದೆ. ಆಲ್ ಇಂಡಿಯಾ ಸರ್ವಿಸ್ ಕಂಡೆಕ್ಟ್ ರೋಲ್ಡ್ ಉಲ್ಲಂಘನೆ ಮಾಡಲಾಗಿದೆ. ನನ್ನ ಮೇಲೆ ಇಪ್ಪತ್ತು ಸುಳ್ಳು ಆರೋಪಗಳನ್ನು ಡಿ.ರೂಪಾ ಮಾಡಿದ್ದಾರೆ. ಡಿ.ರೂಪಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಿಎಸ್‌ಗೆ ರೋಹಿಣಿ ಆಗ್ರಹ ಮಾಡಿದ್ದಾರೆ.
ಅಂತೆಯೇ ನಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಬಾರದು ಎಂದು ಸಿಎಸ್‌ಗೆ ಸಿಂಧೂರಿ ದೂರು ನೀಡಿದ್ದಾರೆ.
ಇನ್ನು ದೂರು ನೀಡಿರುವ ರೋಹಿಣಿ ಸಿಂಧೂರಿ ಇದರ ಬೆನ್ನಲ್ಲೇ ಡಿ ರೂಪಾ ಅವರ ಪ್ರಶ್ನೆಗಳಿಗೆ ಉತ್ತರಗಳನ್ನೂ ನೀಡಿದ್ದಾರೆ.
ರೋಹಿಣಿ ದೂರಿನ ಬೆನ್ನಲ್ಲೇ CSಗೆ ಸ್ಕ್ರೀನ್ಶಾಟ್ ಸಮೇತ ರೂಪಾ ದೂರು ;
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರು ಇಂದು ಬೆಳಗ್ಗೆ ದೂರು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರು, ದಾಖಲೆಗಳ ಸಮೇತ ಪ್ರತಿ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಸಿಎಸ್ ದೂರು ತೆಗೆದುಕೊಂಡಿದ್ದಾರೆ. ಕಂಪ್ಲೀಟ್ ಎಲ್ಲಾ ಮಾಹಿತಿ ಸಿಎಸ್‌ಗೆ ನೀಡಿದ್ದೇನೆ. ವಿಚಾರಣೆ ಮಾಡಿ ತನಿಖೆ ಕೈಗೊಳ್ಳುತ್ತೇನೆ ಎಂದಿದ್ದಾರೆ ಅಂತಾ ಹೇಳಿದರು.
ಇಬ್ಬರಿಗೂ ಖಡಕ್ ಸೂಚನೆ ಕೊಟ್ಟ ಮುಖ್ಯಕಾರ್ಯದರ್ಶಿ ;
ನಿಮ್ಮಿಬ್ಬರ ನಡೆಯಿಂದ ರಾಜ್ಯ ಸರ್ಕಾರಕ್ಕೆ ಮುಜುಗರವಾಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್ ಮಾಡಬಾರದು. ಇಬ್ಬರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದೆಂದು. ಈ ವಿಚಾರಗಳನ್ನು ವೈಯಕ್ತಿಕವಾಗಿ ತೆಗೆದುಕೊಂಡು ಹೋಗಬಾರದು ಎಂದು ಪ್ರತ್ಯೇಕವಾಗಿ ದೂರು ನೀಡಲು ಬಂದಿದ್ದ ಡಿ.ರೂಪಾ, ರೋಹಿಣಿ ಸಿಂಧೂರಿಗೆ ಸಿಎಸ್ ವಂದಿತಾ ಶರ್ಮಾ ಖಡಕ್ ಸೂಚನೆ ನೀಡಿ ಕಳುಹಿಸಿದ್ದಾರೆ.
ನಿನ್ನೆಯಿಂದಲೂ ಈ ಇಬ್ಬರ ನಡುವೆ ಸೋಶಿಯಲ್ ಮಿಡಿಯಾದಲ್ಲಿ ಆರೋಪ-ಪ್ರತ್ಯಾರೋಪಗಳ ಜಟಾಪಟಿ ತಾರಕ್ಕಕೇರಿದ್ದು, ಸಾರ್ವಜನಿಕರು ಇಬ್ಬರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬೆಳವಣಿಗೆ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತದೆ ಎಂದು ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ತಮ್ಮ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಒಟ್ಟಿನಲ್ಲಿ ಇದೀಗ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳ ಕಾಳಗ ಈಗ ಹಾದಿ ರಂಪ, ಬೀದಿ ರಂಪಾಟಕ್ಕೆ ಮುಖ್ಯಕಾರ್ಯದರ್ಶಿ ಸದ್ಯ ಬ್ರೇಕ್ ಹಾಕಿದ್ದಾರೆ. ಆದ್ರೆ ಈ ಅಧಿಕಾರಿಗಳ ವಿರುದ್ಧ ಏನು ಕ್ರಮಕೈಗೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
The ugly spat between IPS officer D Roopa and IAS officer Rohini Sindhuri was taken up by the Chief Secretary (CS) Vandita Sharma, who summoned both officers and sought an explanation from both. Rohini Sindhuri on Monday morning met Chief Secretary Vandita Sharma and gave a statement on the allegations made by Roopa.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm