ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm