ಬ್ರೇಕಿಂಗ್ ನ್ಯೂಸ್
11-03-23 11:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಬಿಜೆಪಿ ಪಾಲಿನ ಭದ್ರ ಮತಬ್ಯಾಂಕ್ ಎನಿಸಿಕೊಂಡಿದ್ದ ಲಿಂಗಾಯತ ಸಮುದಾಯದ ಮುಖಂಡರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ''ಆಪರೇಷನ್ ಲಿಂಗಾಯತ ಲೀಡರ್ಸ್'' ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಗುರುತಿಸಿಕೊಂಡಿರುವ ನಾಯಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೆಳೆಯತೊಡಗಿದೆ.

ಬಿಜೆಪಿಯಲ್ಲಿರುವ ಹಳೆ ಮೈಸೂರು ಭಾಗದ ಪ್ರಬಾವಿ ಲಿಂಗಾಯತ ಮುಖಂಡ ವಸತಿ ಸಚಿವ ವಿ. ಸೋಮಣ್ಣ, ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮೋಹನ್ ಲಿಂಬೆಕಾಯಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಶಾಸಕರು, ಮಾಜಿ ಶಾಸಕರು ಸೇರಿದಂತೆ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಸ್ಥಳೀಯ ಮಟ್ಟದ ನಾಯಕರಿಗೂ ಗಾಳ ಹಾಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಹಾಗು ಇನ್ನಿತರ ಮುಖಂಡರು ನಿರಂತರ ಕಸರತ್ತು ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಬೆಂಬಲಿಗರಾಗಿದ್ದ ಮಾಜಿ ಶಾಸಕ ಯು.ಬಿ ಬಣಕಾರ್, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಈ ಹಿಂದೆ ಕೆಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಿರಣ್ ಕುಮಾರ್, ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಪ್ತರಾಗಿದ್ದ ತಮ್ಮಯ್ಯ ಅವರನ್ನು ಆಪರೇಷನ್ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲಾಗಿದೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿನಿಧಿಸುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ವಿ.ಎಸ್ ಪಾಟೀಲ್ ಅವರನ್ನು ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಶಾಕ್ ನೀಡಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ ಹೀಗೆ ಸ್ಥಳೀಯಾಡಳಿತ ಕ್ಷೇತ್ರಗಳಲ್ಲಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಸದಸ್ಯರಾಗಿದ್ದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಮುಖಂಡರನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೆಳೆದುಕೊಳ್ಳತೊಡಗಿದೆ.

ವೀರಶೈವ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಬಳಿಕ ಬಿಜೆಪಿ ಬಗ್ಗೆ ಬೇಸರಗೊಂಡಿರುವ ಲಿಂಗಾಯತರ ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಚುನಾವಣೆ ಹೊತ್ತಿಗೆ ರಾಜ್ಯದ ಉದ್ದಗಲದಲ್ಲಿ ಹೆಚ್ಚಿನ ವೀರಶೈವ ಲಿಂಗಾಯತ ಮುಖಂಡರನ್ನು ಪಕ್ಷಕ್ಕೆ ಕರೆತರುವ ಸಾಹಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಬಿಜೆಪಿ ಪಾಲಿಗೆ ಬಹುದೊಡ್ಡ ಶಾಕಿಂಗ್ ನಡೆ ಎನ್ನಬೇಕಷ್ಟೆ.
Determined to ensure it wins a majority in the upcoming elections, Congress is making big efforts to woo ‘winnable’ lawmakers from BJP and JD(S), including some of those who deserted the party in.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm