ಬ್ರೇಕಿಂಗ್ ನ್ಯೂಸ್
15-03-23 12:24 pm HK news Desk ಕರ್ನಾಟಕ
ಹಾವೇರಿ, ಮಾ.15: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿರುವ ಎಂಎಲ್ಸಿ ಆರ್.ಶಂಕರ್ ಅವರ ರಾಣೇಬೆನ್ನೂರು ನಗರದ ಬೀರೇಶ್ವರ ಬಡವಾಣೆಯ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ವಾಣಿಜ್ಯ ತೆರಿಗೆ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರಿಗೆ ಎಂದು ವಿತರಣೆ ಮಾಡಲು ತಂದಿರಿಸಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕರ್ ಭಾವಚಿತ್ರವುಳ್ಳ ಸೀರೆಗಳ ಬಾಕ್ಸ್, ತಟ್ಟೆ, ಲೋಟ ಹಾಗೂ ಎಲ್‌ಕೆಜಿಯಿಂದ ಪದವಿ ವಿದ್ಯಾರ್ಥಿಗಳಿಗೆ ಹಂಚಲು ತಂದಿದ್ದ ಬ್ಯಾಗ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರು ಸಾವಿರದಷ್ಟು ಸೀರೆಗಳು ಇದ್ದವು ಎನ್ನಲಾಗುತ್ತಿದೆ.
ಅಧಿಕಾರಿಗಳು ಆರ್.ಶಂಕರ್ ನಿವಾಸದಲ್ಲಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಪತ್ರ, ಬಿಲ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆ, ಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಸೀಜ್ ಆಗಿರುವ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ.
ಶಂಕರ್ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಅಭಿಮಾನಿಗಳು ಮತ್ತು ಬೆಂಬಲಿಗರು ನಿವಾಸದ ಮುಂದೆ ಸೇರಿದ್ದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಶಂಕರ್ ಗೆಲುವು ಕಂಡು ಅನೇಕ ರಾಜಕೀಯ ಮುಖಂಡರು ಭಯಗೊಂಡಿದ್ದಾರೆ. ಅದಕ್ಕೆ ಷಡ್ಯಂತ್ರ ಮಾಡಿ ತಪ್ಪು ಮಾಹಿತಿ ನೀಡಿದ್ದಾರೆ. ನಾವೆಲ್ಲರೂ ಆರ್.ಶಂಕರ್ ಪರ ನಿಲ್ಲುತ್ತೇವೆ. ನಮ್ಮ ನಾಯಕರ ಬಳಿ ವಶಕ್ಕೆ ಪಡೆದ ವಸ್ತುಗಳ ದಾಖಲೆ ಮತ್ತು ಬಿಲ್ಗಳಿವೆ. ಎಲ್ಲವನ್ನೂ ಅಧಿಕಾರಿಗಳ ಮುಂದೆ ಹಾಜರುಪಡಿಸುತ್ತಾರೆ ಎಂದು ಆರ್.ಶಂಕರ್ ಬೆಂಬಲಿಗರು ಹೇಳಿದ್ದಾರೆ.
ಆರ್. ಶಂಕರ್ ಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನಲಾಗುತ್ತಿದ್ದು ಹೀಗಾಗಿ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಚುನಾವಣೆಗೆ ಮೊದಲೇ ಮತದಾರರಿಗೆ ಆಮಿಷವೊಡ್ಡಲು ಗೃಹೋಪಯೋಗಿ ವಸ್ತುಗಳನ್ನು ತಂದಿರಿಸಿದ್ದರು. ಈ ಹಿನ್ನೆಲೆಯಲ್ಲಿ ಶಂಕರ್ ಮನೆಗೆ ವಾಣಿಜ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
Haveri MLA R Shankar house raided by commercial tax department, bundles of sarees and bags seized. He had planned to join the Congress party. A huge protest by his followers takes place.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm