ಬ್ರೇಕಿಂಗ್ ನ್ಯೂಸ್
19-03-23 01:17 pm Headline Karnataka Staffer ಕರ್ನಾಟಕ
ಬೆಂಗಳೂರು, ಮಾ.19: ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಮಂಡ್ಯದಲ್ಲಿ ರೌಡಿಶೀಟರ್ ಫೈಟರ್ ರವಿ ಸ್ವಾಗತಿಸಿದ್ದು ಟೀಕೆಗೊಳಗಾಗುತ್ತಲೇ ಬಿಜೆಪಿ ಎಚ್ಚತ್ತುಕೊಂಡಿದೆ. ಬೆಂಗಳೂರಿನ ರೌಡಿ ಸೈಲೆಂಟ್ ಸುನಿಲನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಸೈಲೆಂಟ್ ಸುನೀಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಾರ್ಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹಲವು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ರೌಡಿ ಸೈಲೆಂಟ್ ಸುನೀಲ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದಲ್ಲದೆ, ಅದಕ್ಕೆ ಬಿಜೆಪಿ ನಾಯಕರನ್ನು ಕರೆಸಿದ್ದು ರೌಡಿ ಸುನೀಲ್ ಬಿಜೆಪಿ ಸೇರಲಿದ್ದಾನೆಂಬ ಸುದ್ದಿ ಹರಡಿತ್ತು. ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ವಿಪಕ್ಷಗಳು ಬಿಜೆಪಿಯನ್ನು ಹೀಗಳೆದಿದ್ದವು. ಆದರೆ ಇತ್ತೀಚೆಗೆ ಮೋದಿಯನ್ನು ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡಿದ್ದು ಭಾರೀ ಮುಜುಗರ ಸೃಷ್ಟಿಸಿತ್ತು.
ಬೆಕ್ಕಿನ ಕಣ್ಣು ರಾಜೇಂದ್ರ ಕೊಲೆ ಸೇರಿ 17 ಪ್ರಕರಣಗಳಲ್ಲಿ ಆರೋಪಿ ಆಗಿದ್ದ ಸೈಲೆಂಟ್ ಸುನೀಲ್‌ನ ಹೆಸರು ಬೆಂಗಳೂರಿನ ಹಲವು ಠಾಣೆಗಳಲ್ಲಿ ರೌಡಿಪಟ್ಟಿಯಲ್ಲಿದೆ. ತಮ್ಮ ವಿರುದ್ಧದ 17 ಪ್ರಕರಣಗಳಿಗೂ ಸುನೀಲ್, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾನೆ. ಯಾವುದೇ ವಾರಂಟ್‌ಗಳು ಬಾಕಿ ಇಲ್ಲ. ಆನಂತರ ಬಿಬಿಎಂಪಿ ಕಸ ಸಾಗಣೆ ಹಾಗೂ ಇತರೆ ಕೆಲಸಗಳಲ್ಲಿ ತೊಡಗಿಸಿಕೊಂಡು ಹಣ ಮಾಡುತ್ತಿದ್ದಾನೆ. ಈಗ ಬಿಜೆಪಿ ಸೇರಿ ರಾಜಕೀಯಕ್ಕೆ ಬರಲು ಯೋಚಿಸುತ್ತಿದ್ದಾನೆ ಎನ್ನುವ ಮಾತುಗಳು ಕೇಳಿಬಂದಿದ್ದವು.
After a row over history-sheeter Silent Sunil’s membership in Karnataka BJP, the state unit has announced that he is expelled from the party. Sunil Kumar, aka Silent Sunil has a history of rowdy sheet and BJP claimed that he joined the party through the membership drive in Bengaluru’s Chamarajpet.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm