ಬ್ರೇಕಿಂಗ್ ನ್ಯೂಸ್
19-03-23 10:51 pm HK News Desk ಕರ್ನಾಟಕ
ಬೆಂಗಳೂರು, ಮಾ.19: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‌ಡಿಎಲ್) ಕೆಮಿಕಲ್ ಆಯಿಲ್ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲೇಬೇಕು ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ್ದಾರೆ.
ಅಕ್ರಮದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಬಂಧನ ಆಗಿದೆ. ಅಲ್ಲದೆ, ವಿರೂಪಾಕ್ಷಪ್ಪ ಹೆಸರು ಕೂಡ ಪ್ರಸ್ತಾಪವಾಗಿದೆ. ವಿರೂಪಾಕ್ಷಪ್ಪ ಪ್ರತಿದಿನ ನೋಟ್ಸ್ ಬರೆದುಕೊಂಡು ಬಂದು ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ, ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಲೋಕಾಯುಕ್ತ ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅರ್ಜಿದಾರರು ಹಾಗೂ ಲೋಕಾಯುಕ್ತ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಪೀಠ ಆದೇಶ ಕಾಯ್ದಿರಿಸಿತು.
'ವಿರೂಪಾಕ್ಷಪ್ಪ ಪರ ವಕೀಲರು, ಅರ್ಜಿದಾರರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆ ಮುಕ್ತಾಯದ ಹಂತದಲ್ಲಿರುವಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.
ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲರು ವಾದ ಮಂಡಿಸಿ, 'ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಬೇರೊಬ್ಬರ ಮೂಲಕ ಸ್ವೀಕರಿಸುತ್ತಾರೆ. ಇಲ್ಲೂ ಸಹ ಅದೇ ರೀತಿಯಾಗಿದ್ದು, ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದರು.
The Lokayukta police on Friday argued before the high court that Channagiri BJP MLA and former chairman of the Karnataka Soaps and Detergents Ltd (KSDL) K Madal Virupakshappa is required for custodial interrogation to obtain more information as he is not cooperating with the investigation and giving evasive answers.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm