ಬ್ರೇಕಿಂಗ್ ನ್ಯೂಸ್
24-03-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : 2 ಬಿಯಲ್ಲಿರುವ ಮುಸ್ಲಿಮರ ಮೀಸಲಾತಿಗೆ ಕತ್ತರಿ ಪ್ರಯೋಗ ಹಾಕಿದ್ದು, ಅದನ್ನು ಪ್ರತಿಯಾಗಿ ಒಕ್ಕಲಿಗರಿಗೆ ಹಾಗೂ ವೀರಶೈವ ಲಿಂಗಾಯತರಿಗೆ ಹಂಚಿಕೆ ಮಾಡಿ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾದ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. 2 ಬಿಯಲ್ಲಿರುವ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಇತ್ತು. ಆದರೆ ಇದೀಗ ಅದನ್ನು 2 ಸಿ ಗೆ ಶೇ 2 ಹಾಗೂ 2 ಡಿಗೆ ಶೇ. 2 ರಷ್ಟು ಹಂಚಿಕೆ ಮಾಡಲಾಗಿದೆ. ಇನ್ನು 2 ಬಿಯಲ್ಲಿದ್ದ ಮುಸ್ಲಿಮರಿಗೆ ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್) ಮೀಸಲಾತಿ ವ್ಯಾಪ್ತಿಗೆ ವರ್ಗಾವಣೆ ಮಾಡಿ ಸಂಪುಟ ನಿರ್ಧಾರ ಕೈಗೊಂಡಿದೆ. ಈ ಮೂಲಕ 2 ಸಿ ಯಲ್ಲಿರುವ ಒಕ್ಕಲಿಗರಿಗೆ ಶೇ. 4 ರಿಂದ ಶೇ. 6 ಹಾಗೂ 2 ಡಿ ಯಲ್ಲಿರುವ ವೀರಶೈವ ಹಾಗೂ ಲಿಂಗಾಯತರಿಗೆ ಶೇ. 5 ರಿಂದ ಶೇ 7 ರಷ್ಟು ಮೀಸಲಾತಿ ಹೆಚ್ಚಳ ಆಗುತ್ತದೆ.
ಎಸ್ ಸಿ ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡಲಾಗಿತ್ತು. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ನೀಡಿದ ವರದಿಗೆ ಕ್ಯಾಬಿನೆಟ್ ಅಸ್ತು ಎಂದಿದೆ. ಎಸ್ ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಸಿಗುವ ನಿಟ್ಟಿನಲ್ಲಿ ಆರ್ಟಿಕಲ್ 341(2) ಅನ್ವಯ ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲಾಗಿದೆ.
ಎಸ್ ಸಿ (ಎಡ) ಶೇ.6, ಎಸ್ ಸಿ (ಬಲ) ಶೇ. 5.5, ಸ್ಪರ್ಶರಿಗೆ ಶೇ. 4.5 ಹಾಗೂ ಇತರರಿಗೆ ಶೇ. 1 ರಷ್ಟು ನೀಡಲು ಸಂಪುಟ ಉಪಸಮಿತಿ ಮಾಡಿದ ಶಿಫಾರಸ್ಸುಗೆ ಕ್ಯಾಬಿನೆಟ್ ಸಮ್ಮತಿ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಡು ಕುರುಬ ಹಾಗೂ ಗೊಂಡ ಕುರುಬ ಪಂಗಡವನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಬಂಧಿತ ಇಲಾಖೆಗೆ ಸೂಚನೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿರುವ ಕುರುಬ ಸಮುದಾಯದ ಪಂಗಡವಾದ ಕಾಡು ಕುರಬ ಹಾಗೂ ಗೊಂಡ ಕುರುಬರನ್ನು ಶಿಫಾರಸು ಮಾಡಿದೆ. ಮೈಸೂರು ವಿಶ್ವ ವಿದ್ಯಾನಿಲಯ ಮಾನವ ಶಾಸ್ತ್ರ ಅಧ್ಯಯನ ವಿಭಾಗಕ್ಕೆ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ತಿಳಿಸಲಾಗಿತ್ತು. ಅವರು ಗುರುವಾರ ಅಧ್ಯಯನ ವರದಿಯನ್ನು ನೀಡಿದ್ದರು. ಅದೂ ಕೂಡ ಸಂಪುಟದಲ್ಲಿ ಚರ್ಚೆ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Karnataka’s outgoing government headed by Basavaraj Bommai on Friday decided to take off Muslims from the other backward communities (OBC) list and move them into the economically weaker sections (EWS) quota while handing a 2% increase for the dominant Lingayats and Vokkaligas.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm