ಬ್ರೇಕಿಂಗ್ ನ್ಯೂಸ್
29-03-23 10:29 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ರೋಡ್ ಶೋ ವೇಳೆ ಕಲಾವಿದರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರದಲ್ಲಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ತೆರೆದ ಬಸ್ನಲ್ಲಿ ರೋಡ್ ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್ಡಿಪಿಐ ಮುಖಂಡನೊಬ್ಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರದಲ್ಲೂ ದೂರು ಸಲ್ಲಿಸಲಾಗಿದೆ.
ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಮುಸ್ಲಿಮರ ಮೀಸಲಾತಿ ವಾಪಸ್ ಕೊಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಡ್ಡಿ ಬಿಚ್ಚಿಸುತ್ತೇವೆ ಎಂದು ಚಿತ್ರದುರ್ಗ ಜಿಲ್ಲೆಯ ಎಸ್ಡಿಪಿಐ ಮುಖಂಡರೊಬ್ಬರು ಇತ್ತೀಚೆಗೆ ಹೇಳಿದ್ದರು. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸುವ ಬಗ್ಗೆ ಕಳೆದ ವಾರ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್ಡಿಪಿಐ ಮುಖಂಡರು ಬಿಜೆಪಿ ಹಾಗೂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದರು.
Karnataka BJP Wednesday filed a complaint against state Congress president DK Shivakumar after videos of him showering currency notes on crowds during a roadshow emerged on Tuesday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm