ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm