ಬ್ರೇಕಿಂಗ್ ನ್ಯೂಸ್
07-04-23 07:14 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.7: ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ವೈ.ಎಸ್.ವಿ.ದತ್ತಾ ತೀವ್ರ ಬೇಸರಗೊಂಡಿದ್ದು ಪಕ್ಷೇತರ ನಿಲ್ಲುತ್ತಾರಾ ಎನ್ನುವ ಕುತೂಹಲ ಉಂಟಾಗಿದೆ. ಟಿಕೆಟ್ ಸಿಗದ ಬೇಸರದಲ್ಲಿ ಅಭಿಮಾನಿಗಳಿಗೆ ಪತ್ರ ಬರೆದಿದ್ದು ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನ ಎಂದು ದತ್ತ ಮೇಷ್ಟ್ರು ಬರೆದುಕೊಂಡಿದ್ದಾರೆ.
ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅಭಿಮಾನಿಗಳ ಸಭೆ ಕರೆಯುತ್ತೇನೆ. ಕಡೂರಿನಲ್ಲಿ ಭಾನುವಾರ (ಎ.9) ಬೆಳಗ್ಗೆ 11 ಗಂಟೆಗೆ ಸಭೆಯಲ್ಲಿ ಮಾತುಕತೆ ನಡೆಸಿ ಮುಂದಿನ ನಡೆಯನ್ನು ನಿರ್ಧರಿಸುತ್ತೇನೆ ಎಂದು ವೈ.ಎಸ್.ವಿ.ದತ್ತಾ ತಿಳಿಸಿದ್ದಾರೆ.
ನನ್ನ ಬಳಿ ಹಣ-ಜಾತಿ ಬಲ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಾ.. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಾ.. ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದು ಮಾರ್ಮಿಕ ಮಾತುಗಳನ್ನು ದರ್ತಾ ಪತ್ರದಲ್ಲಿ ಬರೆದಿದ್ದಾರೆ.
ಕಡೂರು ಮತದಾರರ ಸ್ವಾಭಿಮಾನಕ್ಕಾಗಿ ಸಭೆ ಕರೆದಿದ್ದಾರೆ ಎನ್ನಲಾಗುತ್ತಿದೆ. ಇವರ ನಿಲುವು ನೋಡಿದರೆ ಕ್ಷೇತ್ರದಲ್ಲಿ ಪಕ್ಷೇತರ ಕಣಕ್ಕಿಳಿಯುವ ಸೂಚನೆ ಇದೆ. ದತ್ತಾ ಅವರು ಕಡೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹೀಗಾಗಿ ಇತ್ತೀಚೆಗೆ ಜೆಡಿಎಸ್ ಬಿಟ್ಟು ದತ್ತಣ್ಣ ಕಾಗ್ರೆಸ್ ಸೇರಿದ್ದರು. ಕಡೂರಿನ ಕಾಂಗ್ರೆಸ್ ಟಿಕೆಟ್ ಈ ಬಾರಿ ದತ್ತ ಅವರಿಗೆ ಎಂದು ಹೇಳಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದರು.
ಆದರೆ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಕೆ.ಎಸ್. ಆನಂದ್ ಹೆಸರು ಕಡೂರು ಕ್ಷೇತ್ರಕ್ಕೆ ಅಂತಿಮ ಮಾಡಲಾಗಿದೆ. ದತ್ತ ಅವರಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ದತ್ತ ಮನೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಪಕ್ಷೇತರವಾಗಿ ಚುನಾವಣೆ ಸ್ಪರ್ಧೆ ಮಾಡುವಂತೆ ದತ್ತಗೆ ಅಭಿಮಾನಿಗಳು ಸಲಹೆ ನೀಡಿದ್ದಾರೆ. ಇದಕ್ಕೆ ದತ್ತಣ್ಣ ತನ್ನ ಅಭಿಮಾನಿಗಳಿಗೆ ಎರಡು ದಿನ ಅವಕಾಶ ಕೇಳಿದ್ದಾರೆ. ಭಾನುವಾರದ ಸಭೆ ಬಳಿಕ ದತ್ತ ಅವರ ಮುಂದಿನ ತೀರ್ಮಾನ ಪ್ರಕಟವಾಗಲಿದೆ.
Congress Rebellion in Kadur, Duttannas emotional letter to fans. Congress Leader Y S V Datta who failed to get ticket to contest from Kadur constituency said that a meeting of his followers has been convened at Kadur on April 9 to discuss his future course of action. In a letter to his followers
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm