ಬ್ರೇಕಿಂಗ್ ನ್ಯೂಸ್
26-10-20 09:29 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .26 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕೊನೆಯ ದಿನದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಕೇವಲ 300 ಮಂದಿಗೆ ಮಾತ್ರ ಜಂಬೂಸವಾರಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಸೀಮಿತ ಮಂದಿಯಷ್ಟೇ ಪಾಲ್ಗೊಳ್ಳಲಿದ್ದಾರೆ. ಪ್ರತಿ ವರ್ಷ ಲಕ್ಷಾಂತರ ಮಂದಿ ಭಾಗವಹಿಸುತ್ತಿದ್ದ ಜಂಬೂ ಸವಾರಿ ಈ ಬಾರಿ ಸೀಮಿತ ಸಂಖ್ಯೆಯ ವೀಕ್ಷಕರ ನಡುವೆ ಸಂಪನ್ನಗೊಳ್ಳಲಿದೆ.
ಮಧ್ಯಾಹ್ನ 2 ಗಂಟೆ 59 ನಿಮಿಷದಿಂದ 3 ಗಂಟೆ 20 ನಿಮಿಷದ ನಡುವಿನ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಂದಿದ್ವಜಕ್ಕೆ ಪೂಜೆ ಸಲ್ಲಿಸಲಿದ್ದು ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 3 ಗಂಟೆ 40 ನಿಮಿಷದಿಂದ 4 ಗಂಟೆ 15 ನಿಮಿಷದೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಆಬಳಿಕ ಅರಮನೆ ಆವರಣದಿಂದ ಜಂಬೂ ಸವಾರಿ ಆರಂಭಗೊಳ್ಳಲಿದೆ.
ಅರಮನೆ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಅರಮನೆ ಸುತ್ತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 300 ಮಂದಿ ಪಾಲ್ಗೊಳ್ಳುವ ಗ್ಯಾಲರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಆಸನ ವ್ಯವಸ್ಥೆ ಮಾಡಲಾಗಿದೆ.
ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಕೇವಲ ಎರಡು ಸ್ತಬ್ದಚಿತ್ರಗಳು, ಐದು ಜನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. ಕೊರೊನಾ ಜಾಗೃತಿ ಮೂಡಿಸುವ ಒಂದು ಸ್ತಬ್ದಚಿತ್ರ ಪ್ರಮುಖವಾಗಿ ಪಾಲ್ಗೊಳ್ಳುತ್ತಿದೆ.
ನೇರ ವೀಕ್ಷಣೆಗೆ ನಿರ್ಬಂಧ ಇರುವುದರಿಂದ ಜನರು ವರ್ಚುವಲ್ ನೇರ ಪ್ರಸಾರ ಹಾಗೂ ಮಾಧ್ಯಮಗಳ ಮೂಲಕ ಮೆರವಣಿಗೆ ವೀಕ್ಷಿಸಿ ಕಣ್ತುಂಬಿಕೊಳ್ಳಬೇಕಾಗಿದೆ
Amid the covid-19 scare, the government has agreed to organise the world famous Dasara celebrations in the palace city of Mysuru in a "simple" way. Jamboo Savari, the biggest attractions of Mysuru Dasara, will be telecast live on Doordarshan Chandana and some social media platforms.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am