ಬ್ರೇಕಿಂಗ್ ನ್ಯೂಸ್
08-04-23 11:26 pm Bengaluru Correspondent ಕರ್ನಾಟಕ
ಬೆಂಗಳೂರು, ಎ.8: ಗುಜರಾತ್‌ನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತ್ತಿದೆ. ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕಕ್ಕೆ ಋಣಿಯಾಗಿರಬೇಕಾದ ಅಮುಲ್, ಕೆಎಂಎಫ್‌ಗೆ ಅನಾರೋಗ್ಯಕರ ಪೈಪೋಟಿ ಒಡ್ಡುವ ಮೂಲಕ ಸಹಕಾರ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಹಂತದ ಸಂಚು ನಡೆದಿದೆ. ಅಮುಲ್ ಜೊತೆ ನಂದಿನಿ ವಿಲೀನ ಮಾಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಮೊದಲ ಸಂಚು, ಮೊಸರು ಪ್ಯಾಕೆಟ್ ಮೇಲೆ ಹಿಂದಿಯ 'ದಹಿ' ಪದ ಮುದ್ರಣ ಎರಡನೇ ಸಂಚು. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚುಗಳು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು ಕೇಂದ್ರ ಸರಕಾರ ಅವಕಾಶ ನೀಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.
ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. 'ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್' ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್‌ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಸುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್‌ನಲ್ಲಿಯೇ ಕರ್ನಾಟಕದಲ್ಲಿ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್‌ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ ಎಂದು ಮಾಜಿ ಮುಖ್ಯಮಂತ್ರಿ ಆತಂಕ ಹೊರಹಾಕಿದ್ದಾರೆ.
ಕೆಎಂಎಫ್ ಜೊತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸಹೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ. ಬಿಜೆಪಿ ಡಬಲ್ ಎಂಜಿನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಇಂದು ಹೆಚ್‌ಡಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗುಜರಾತ್‌ನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್‌ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ, ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.
ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಹೆಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಹೆಚ್.ಡಿ.ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್‌ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ. ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್‌ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್ʼಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಹೆಚ್‌ಡಿಕೆ ತೀವ್ರ ವಾಗ್ದಳಿ ನಡೆಸಿದ್ದಾರೆ.
ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು. ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.
Kannadigas should rebel against move to sell Amul milk in Karnataka, H D Kumaraswamy
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm