ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm