ಬ್ರೇಕಿಂಗ್ ನ್ಯೂಸ್
13-04-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.13: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದರಲ್ಲೂ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಟಿಕೆಟ್ ವಂಚಿತ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎಂಪಿ ಕುಮಾರಸ್ವಾಮಿ ಅವರು, ನನಗೆ ಮೂಡಿಗೆರೆ ಕ್ಷೇತ್ರದ ಟಿಕೆಟ್ ತಪ್ಪಲು ಸಿ.ಟಿ.ರವಿ ಕಾರಣ ಎಂದು ಆರೋಪಿಸಿದ್ದಾರೆ.

ಸಿಟಿ ರವಿ ಅವರಿಗೆ ನಿಷ್ಠರಾಗಿ ಹೋಗಬೇಕು, ಅದು ನನ್ನಿಂದ ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲು ಸಿ.ಟಿ.ರವಿ ಕಾರಣ ಆಗುತ್ತಾರೆ. ದೆಹಲಿಯಲ್ಲಿ ಶಾಸಕ ಸಿ.ಟಿ.ರವಿ ಕಣ್ಣಾಮುಚ್ಚಾಲೆ ಆಟ ಆಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡ್ರೆ 50 ಸ್ಥಾನವೂ ಬರಲ್ಲ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಹೈಕಮಾಂಡ್‍ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ.
ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು. ಪಕ್ಷಕ್ಕೆ ನಾನು ಏನು ಅನ್ಯಾಯ ಮಾಡಿದ್ದೇನೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Mudigere MLA M.P. Kumaraswamy submitted his resignation from the primary membership of the BJP to party State unit president Nalin Kumar Kateel. He took this decision after being denied the ticket to contest from Mudigere constituency in Chikkamagaluru district for the Assembly elections in Karnataka, which are scheduled on May 10.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm