ಬ್ರೇಕಿಂಗ್ ನ್ಯೂಸ್
18-04-23 03:33 pm Bangalore Correspondent ಕರ್ನಾಟಕ
ಬೆಂಗಳೂರು, ಎ.18 : ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ತಪ್ಪಲು ಕೆಲವು ನಾಯಕರು ಕಾರಣರಾಗಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸುವ ಸಮಯ ಬಂದಿದೆ. ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್ ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ತಪ್ಪಿದ್ದು ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಂದಾಗಿ ನನಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪಿ ಹೋಯಿತು ಎಂದು ಆರೋಪಿಸಿದ್ದಾರೆ.
ನಿನ್ನೆ ಸೋಮವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ತಮ್ಮ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು.
ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಉತ್ತಮ ಆಡಳಿತ ನೀಡಿದ್ದೇನೆ, ಹಲವು ಜನಪರ ಕಾರ್ಯಕ್ರಮಗಳನ್ನು ತಂದಿದ್ದೇನೆ. ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದೆ. ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ನನ್ನ ಮೇಲಿಲ್ಲ, ಆಪಾದನೆಗಳಿಲ್ಲ. ಯಡಿಯೂರಪ್ಪ, ಅನಂತ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಈಗ ಯಡಿಯೂರಪ್ಪ ನಂತರ ರಾಜ್ಯದಲ್ಲಿ ಪ್ರಮುಖ ಲಿಂಗಾಯತ ನಾಯಕ ನಾನೇ. ಹೀಗಿರುವಾಗ ನನ್ನನ್ನು ಬಿಜೆಪಿಯಲ್ಲಿ ಈ ಮಟ್ಟಕ್ಕೆ ಕಡೆಗಣಿಸಿದ್ದು ತೀರಾ ನೋವುಂಟು ಮಾಡಿದೆ ಎಂದರು.
ಟಿಕೆಟ್ ಕೈತಪ್ಪಲು ಮೂಲಭೂತವಾಗಿ ಬಿ ಎಲ್ ಸಂತೋಷ್ ಅವರೇ ಕಾರಣ. ಪಕ್ಷದ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಟಿಕೆಟ್ ಘೋಷಣೆಯಾಗುವವರೆಗೆ ಸುಮ್ಮನಿದ್ದೆ. ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಕೊನೆಕ್ಷಣಕ್ಕೆ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ, ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಿತ್ತಲ್ಲವೇ ಎಂದು ಜಗದೀಶ್ ಶೆಟ್ಟರ್ ನೋವು ಹೇಳಿಕೊಂಡರು.
Former Karnataka Chief Minister Jagadish Shettar, who dumped the BJP and joined the Congress ahead of high-stakes Assembly polls, said BJP general secretary BL Santhosh was behind his exit from the party. The 67-year-old Lingayat leader stated that BL Santhosh conspired against him, humiliated him by denying him a ticket to contest the election.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm