ಬ್ರೇಕಿಂಗ್ ನ್ಯೂಸ್
18-04-23 10:27 pm HK News Desk ಕರ್ನಾಟಕ
ಮೈಸೂರು, ಎ.18 : ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣಾ ಕ್ಷೇತ್ರಕ್ಕೆ ಬರಬಾರದಾ?
ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಲ್ಲಾ ಎಂದು ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
Pratap Simha slams siddaramaiah, says if Sonia Gandhi from Italy could contest in Ballari, why cant Somanna from Varuna
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm